ರೌಡಿ ಶೀಟರ್ ಸೈಕಲ್ ರವಿ ವಿರುದ್ಧದ ತನಿಖೆ ಇಡಿಗೆ ಹಸ್ತಾಂತರ

ಬೆಂಗಳೂರು, ಜೂನ್ 29 : ರೌಡಿ ಶೀಟರ್ ಸೈಕಲ್ ರವಿ ವಿರುದ್ಧದ ತನಿಖೆಯನ್ನು ಸಿಸಿಬಿ ಪೊಲೀಸರು ಮುಂದುವರೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿಯನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಬುಧವಾರ ಸೈಕಲ್ ರವಿ (42) ಮೇಲೆ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದರು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಕುಟುಂಬಸ್ಥರು ನ್ಯಾಯಾಲಯದ ಅನುಮತಿ ಪಡೆದು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದರು.

ಸಿಸಿಬಿ ಪೊಲೀಸರು ರವಿ ವಿರುದ್ಧದ ತನಿಖೆಯನ್ನು ಮುಂದುವರೆಸಿದ್ದಾರೆ. ರವಿ ಸಹಚರರ ಮನೆ ಮೇಲೆ ದಾಳಿ ನಡೆಸಿದ್ದು, ಕೋಟ್ಯಾಂತರ ರೂ. ಮೌಲ್ಯದ ಬೇನಾಮಿ ಆಸ್ತಿಗಳ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

Cycle Ravi case may hand over to ED

ರಾಜರಾಜೇಶ್ವರಿ ನಗರದಲ್ಲಿರುವ ಸೈಕಲ್ ರವಿ ಶಿಷ್ಯ ಗಿರೀಶ್ ಅಲಿಯಾಸ್ ಕಾಸ್ಲಿ ಗಿರಿ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಬೆಂಗಳೂರು ನಗರದ ಸುತ್ತ-ಮುತ್ತ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಪತ್ರಗಳು ಸಿಕ್ಕಿವೆ.

ಮೈಸೂರು ರಸ್ತೆ, ಕುಂಬಳಗೋಡು, ದೇವನಹಳ್ಳಿ ಸುತ್ತಮುತ್ತ ಕೋಟ್ಯಾಂತರ ರೂ. ಮೌಲ್ಯದ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಖರೀದಿ ಮಾಡಿರುವ ಬಗ್ಗೆ ದಾಖಲೆಗಳು ಲಭ್ಯವಾಗಿವೆ. ಆದ್ದರಿಂದ, ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯಕ್ಕೂ ಹಸ್ತಾಂತರ ಮಾಡುವ ಸಾಧ್ಯತೆ ಇದೆ.

ಕೊಲೆ ಪ್ರಕರಣಕ್ಕೆ ಲಿಂಕ್ : ಸೈಕಲ್ ರವಿ ಅಲಿಯಾಸ್ ಎಂ.ರವಿಕುಮಾರ್ 2011ರಲ್ಲಿ ಚಾಮರಾಜನಗರದಲ್ಲಿ ನಡೆದ ಪುರಸಭೆ ಮಾಜಿ ಸದಸ್ಯ ಮಹಮ್ಮದ್ ಆಸ್ಗರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದೆ.

ಚಿಕಿತ್ಸೆ ಬಳಿಕ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹರೀಶ್ ಎಂಬುವವರ ಕೊಲೆಗೆ ಸಂಚು ರೂಪಿಸಿದ ಆರೋಪವೂ ರವಿ ಮೇಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+