ಸಿಲಿಂಡರ್ ಸ್ಫೋಟ: ಗಾಯಗೊಂಡಿದ್ದ ಮೂವರ ಸಾವು

Posted By: Nayana
Subscribe to Oneindia Kannada

ಬೆಂಗಳೂರು, ನವೆಂಬರ್ ೧೫ : ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಹೆಬ್ಬಗೋಡಿ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಮೃತಪಟ್ಟಿದ್ದಾರೆ. ನಾಲ್ಕನೇ ವ್ಯಕ್ತಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

ಅಸ್ಸಾಂ ಮೂಲದವರಾಗಿರುವ ಇವರ ಕುಟುಂಬದವರು ಮೃತದೇಹಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಲು ಆರ್ಥಿಕವಾಗಿ ಅಷ್ಟೊಂದು ಶಕ್ತರಾಹಗಿಲ್ಲದಿರುವುದರಿಂದ ಇಲ್ಲಿಯೇ ಅಂತ್ಯಸಂಸ್ಕಾರ ನಡೆಸಲಾಯಿತು. ಮೃತಪಟ್ಟವರನ್ನು ವಿಕಾಸ್ ಪ್ರದಾನ, ಅವರ ಪತ್ನಿ ಕರ್ಣಾ, ಸಂಬಂಧಿಕರಾದ ದೇವನ್ ಎಂದು ಗುರುತಿಸಲಾಗಿದೆ.

Cylinder blast claims Three lives

ಚವನ್ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರವನ್ನು ಮೈಸೂರು ರಸ್ತೆಯಲ್ಲಿರುವ ಶವಾಗಾರದಲ್ಲಿ ನಡೆಸಲಾಯಿತು ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Cylinder blast claims three lives, One injured in bengaluru,

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ