ಮಹಿಳೆ ಹತ್ಯೆ, ದಂಡುಪಾಳ್ಯ ಹಂತಕರಿಗೆ ಜೀವಾವಧಿ ಶಿಕ್ಷೆ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 9 : ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ದಂಡುಪಾಳ್ಯ ಗ್ಯಾಂಗ್‌ನ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 17 ವರ್ಷಗಳ ಬಳಿಕ ನ್ಯಾಯಾಲಯ ಪ್ರಕರಣದ ತೀರ್ಪನ್ನು ನೀಡಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವನಗೌಡ ಅವರು ಗುರುವಾರ ತೀರ್ಪು ಪ್ರಕಟಿಸಿದ್ದಾರೆ. 2000ನೇ ಇಸವಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಎಲ್ಲರೂ ದೋಷಿಗಳಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ದಂಡುಪಾಳ್ಯ ಗ್ಯಾಂಗ್ ಸದಸ್ಯರಿಗೆ ಜೀವಾವಧಿ ಶಿಕ್ಷೆ

 Dandupalya gang 5 members sentenced life imprisonment

ಈ ಕೊಲೆ ಪ್ರಕರಣದಲ್ಲಿ ದಂಡುಪಾಳ್ಯ ಗ್ಯಾಂಗ್‌ನ ದೊಡ್ಡ ಹನುಮ, ಲಕ್ಷ್ಮೀ, ಮುನಿಕೃಷ್ಣ, ನಲ್ಲತಿಮ್ಮ, ವೆಂಕಟೇಶ್ ದೋಷಿಗಳು. ಎಲ್ಲಾ ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಿ ವಿಶೇಷ ಕೋರ್ಟ್ ತೀರ್ಪು ನೀಡಿದೆ.

ದಂಡುಪಾಳ್ಯ ಗ್ಯಾಂಗ್ ತಕ್ಷಣ ಬಿಡುಗಡೆಗೆ ಸೂಚನೆ

2000ನೇ ಇಸವಿಯಲ್ಲಿ ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯ ನಿವಾಸಿ ಗೀತಾ ಅವರನ್ನು ಐವರು ಸೇರಿ ಕೊಲೆ ಮಾಡಿದ್ದರು. ನಂತರ ಮನೆಯಲ್ಲಿದ್ದ ಸೀರೆ, ಬೆಲೆಬಾಳುವ ವಸ್ತುಗಳನ್ನು ದೋಚಿದ್ದರು.

ಕುಡಿಯುವ ನೀರು ಕೇಳುವ ನೆಪದಲ್ಲಿ ಗೀತಾ ಮನೆಗೆ ಆಗಮಿಸಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯರು, ಚಾಕುವಿನಿಂದ ಗೀತಾ ಅವರ ಕತ್ತು ಮತ್ತು ಹೊಟ್ಟೆ ಸೀಳಿ ಹತ್ಯೆ ಮಾಡಿದ್ದರು.

17 ವರ್ಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರಿ ಅಭಿಯೋಜಕ ಬಿ.ಎಸ್.ಪಾಟೀಲ್ ಈ ಪ್ರಕರಣದಲ್ಲಿ ವಾದ ಮಂಡನೆ ಮಾಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Parappana Agrahara special court on November 9, 2017 sentenced to life imprisonment for Dandupalya gang 5 members in women murder case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ