ಬಿಬಿಎಂಪಿ : ಘನತ್ಯಾಜ್ಯ ನಿರ್ವಹಣೆಗೆ ವಿಶೇಷ ಆಯುಕ್ತರು

ಬೆಂಗಳೂರಿನ ಕಸದ ಸಮಸ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ರಾಜ್ಯ ಸರ್ಕಾರಕ್ಕೆ ತಲೆನೋವಾಗಿದೆ. ಆದ್ದರಿಂದ ಹೊಸ ಹುದ್ದೆಯೊಂದನ್ನು ಸೃಷ್ಟಿಸಿ ಬುಧವಾರ ಆದೇಶ ಹೊರಡಿಸಿದೆ. ಬಿಬಿಎಂಪಿಯಲ್ಲಿ ಕೆಎಎಸ್ ದರ್ಜೆಯ ಜಂಟಿ ಆಯುಕ್ತರ ಹುದ್ದೆ ಮಾತ್ರ ಇತ್ತು. ಸದ್ಯ ವಿಶೇಷ ಆಯುಕ್ತರ ಹುದ್ದೆಯನ್ನು ಸೃಷ್ಟಿಸಲಾಗಿದೆ. [ದುಬೈ ಪ್ರವಾಸ ರದ್ದುಗೊಳಿಸಿದ ಬಿಬಿಎಂಪಿ ಮೇಯರ್]
ಮಂಡೂರಿನ ಗ್ರಾಮಸ್ಥರು ಘನತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿದ್ದರು. ಕಸ ವಿಲೇವಾರಿ ಸಮಸ್ಯೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಗ್ರಾಮಸ್ಥರಿಂದ ಸಮಸ್ಯೆ ನಿವಾರಣೆಗೆ ಆರು ತಿಂಗಳ ಸಮಯಾವಕಾಶ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದಕ್ಕಾಗಿ ಹೊಸ ಹುದ್ದೆಯೊಂದನ್ನು ಸೃಷ್ಟಿಸಿ ದಕ್ಷ ಅಧಿಕಾರಿಯೊಬ್ಬರಿಗೆ ಅದರ ಹೊಣೆಯನ್ನು ನೀಡಿದ್ದಾರೆ. [ಕಸ ಕಿತ್ತಾಟಕ್ಕೆ ತಾತ್ಕಾಲಿಕ ಮುಕ್ತಿ]
ಬುಧವಾರ ಬಿಬಿಎಂಪಿಯಲ್ಲಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)ರ ಹುದ್ದೆ ಸೃಷ್ಟಿಸಲಾಗಿದ್ದು, ಈ ಹುದ್ದೆ ದಕ್ಷ ಐಎಎಸ್ ಅಧಿಕಾರಿ ದರ್ಪಣ ಜೈನ್ ಅವರನ್ನು ನೇಮಕ ಮಾಡಲಾಗಿದೆ ಇದರ ಜೊತೆಗೆ ಜೈನ್ ಅವರು, ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.
ಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟ ಸೇವೆ ಸಲ್ಲಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿ ಪಡೆದಿರುವ ದರ್ಪಣ ಜೈನ್ ಅವರು ಹಿಂದೆ ಧಾರವಾಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ವೇಳೆ ಅವ ಕಾರ್ಯವೈಖರಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. 2001ನೇ ಬ್ಯಾಚ್ ಐಎಎಸ್ ಅಧಿಕಾರಿ ಜೈನ್ ಅವರು, ಮ್ಯಾಕಾನಿಕಲ್ ಇಂಜಿನಿಯರಿಂಗ್ ಪದವೀಧರರು.












Click it and Unblock the Notifications