ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದರ್ಶನ್ ಮನೆ ತೆರವು ಖಚಿತ: ಜಿಲ್ಲಾಧಿಕಾರಿ ಶಂಕರ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್, 19: ನಟ ದರ್ಶನ್ ಅವರ ಮನೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಆಸ್ಪತ್ರೆಯನ್ನು ತೆರವುಗೊಳಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿ.ಶಂಕರ್ ಅವರು ದರ್ಶನ್ ಅವರ ಮನೆ, ಶಿವಶಂಕರಪ್ಪ ಅವರ ಆಸ್ಪತ್ರೆ ಸೆರಿದಂತೆ 69 ಆಸ್ತಿಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Darshan's house and S.S Hospital to be razed

ಈ ಆಸ್ತಿಗಳು ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವುದು ದೃಢಪಟ್ಟಿದ್ದು, ಶನಿವಾರ (ಅ.22)ದಂದು ಜಿಲ್ಲಾಡಳಿತದ ವತಿಯಿಂದ ತೆರವುಗೊಳಿಸಿ ಪಾಲಿಕೆ ಆಸ್ತಿ ಎಂದು ಫಲಕಗಳನ್ನು ಹಾಕಲಾಗುವುದು ಎಂದು ತಿಳಿಸಿದ್ದರು. [ರಾಜಕಾಲುವೆ ಒತ್ತುವರಿ ವಿವರ ಈಗ ವೆಬ್ಸೈ ಟ್ನ ನಲ್ಲಿ ಲಭ್ಯ]

ನಟ ದರ್ಶನ್ ಅವರು ಒಟ್ಟು 2,100 ಚ. ಅಡಿ ರಾಜ ಕಾಲುವೆ ಪ್ರದೇಶ ಒತ್ತುವರಿ ಮಾಡಿ ಮನೆ ನಿರ್ಮಿಸಿರುವುದು ಬಿಬಿಎಂಪಿ ಪರಿಶೀಲನೆಯಲ್ಲಿ ದೃಢಪಟ್ಟಿತ್ತು.

Darshan's house and S.S Hospital to be razed

ಶಾಸಕ ಶಾಮನೂರು ಶಿವಶಂಕರಪ್ಪ ಅವರ ಎಸ್.ಎಸ್. ಆಸ್ಪತ್ರೆಯು ಸಹ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವುದು ದೃಢಪಟ್ಟಿದೆ. ಒಟ್ಟು 22ಗುಂಟೆ ಒತ್ತುವರಿ ಸ್ಥಳ ಗುರುತಿಸಲಾಗಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಅವರು ಈ ಹಿಂದೆ ಒನ್ ಇಂಡಿಯಾಗೆ ತಿಳಿಸಿದ್ದರು.

English summary
The Bengaluru urban district authorities have decided to demolish on October 22, the Shamanur Shivashankarappa Hospital and Kannada film actor Darshan's house
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X