ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಹುಲ್ ಗ್ರೀನ್ ಸಿಗ್ನಲ್ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ: ಪರಮೇಶ್ವರ

|
Google Oneindia Kannada News

ಬೆಂಗಳೂರು, ನವೆಂಬರ್ 22: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಹೇಳಿದ್ದಾರೆ.

ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿದೆ. ಚುನಾವಣಾ ಪ್ರವಾಸದಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ತೊಡಗಿಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಯಾವ ರೀತಿ ಸೂಚನೆ ನೀಡುತ್ತಾರೋ ಹಾಗೆಯೇ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಮಹತ್ವದ ಮಾತುಕತೆ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಮಹತ್ವದ ಮಾತುಕತೆ

ಇಷ್ಟು ದಿನ ಸಚಿವ ಸಂಪುಟ ವಿಸ್ತರಣೆ ಜವಾಬ್ದಾರಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಹೆಗಲಿಗೆ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳುತ್ತಿದ್ದರು.

ಆಷಾಢ ಮಾಸ ಕಳೆಯುವವರೆಗೂ ಸಂಪುಟ ವಿಸ್ತರಣೆ ಇಲ್ಲ ಆಷಾಢ ಮಾಸ ಕಳೆಯುವವರೆಗೂ ಸಂಪುಟ ವಿಸ್ತರಣೆ ಇಲ್ಲ

DCM says waiting for RaGa green signal for cabinet expansion

ಇದೀಗ ಆ ವಿಷಯ ಕೈಬಿಟ್ಟು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಲೋಕಸಭಾ ಚುನಾವಣೆವರೆಗೂ ಸಚಿವ ಸಂಪುಟ ವಿಸ್ತರಣೆಯಾಗುವುದು ಅನುಮಾನ ಎಂದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

English summary
Deputy chief minister Dr.G. Parameshwar has said that they are waiting for green signal from AICC president Rahul Gandhi for cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X