ಬೆಂಗಳೂರಿನಲ್ಲಿ ಶೀಘ್ರ ಬೈಕ್ ಟ್ಯಾಕ್ಸಿ ಸೇವೆ: ಬಿ. ದಯಾನಂದ್

Posted By: Nayana
Subscribe to Oneindia Kannada

ಬೆಂಗಳೂರು, ಜನವರಿ 10: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡುವ ಸಂಬಂಧ ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಅನುಮತಿ ನೀಡಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ನಗರದಲ್ಲಿ ಬೈಕ ಟ್ಯಾಕ್ಸಿಗೆ ಅನುಮತಿ ನೀಡುವ ಸಂಬಂಧ ಬಿಎಂಟಿಸಿ, ಬಿಎಂಆರ್ ಸಿಎಲ್ ಹಾಗೂ ನಗರ ಸಂಚಾರ ಪೊಲೀಸರೊಂದಿಗೆ ಚರ್ಚಿಸಲಾಗಿದೆ. ಈಗಾಗಲೇ ಕೇರಳ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿವೆ. ಬೆಂಗಳೂರಿನಲ್ಲೂ ಬೇಡಿಕೆ ಬಂದಿದ್ದು ಶೀಘ್ರದಲ್ಲೇ ಅನುಮತಿ ನೀಡಲಾಗುವುದು. ಈ ನಡುವೆ ಸಾರಿಗೆ ಇಲಾಖೆ ಅಧಿಕಾರಿಗಳು ನೆರೆಯ ರಾಜ್ಯಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಮೆಟ್ರೋ ನಿಲ್ದಾಣದಿಂದ ಬಸ್ ನಿಲ್ದಾಣಗಳಿಗೆ ಇ-ಆಟೋ ಸಂಪರ್ಕ

ಅಂತೆಯೇ ಇ-ರಿಕ್ಷಾಗಳ ಸಂಚಾರಕ್ಕೂ ಅನುಮತಿ ನೀಡುವ ಸಂಬಂಧ ಚರ್ಚಿಸಲಾಗುತ್ತಿದೆ. ಪರಿಸರ ಸ್ನೇಹಿಯಾಗಿರುವ ಇ-ರಿಕ್ಷಾ ಸೇವೆಗೆ ಅವಕಾಶ ಕೋರಿ ಹಲವು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ, ಬಿಎಂಆರ್ ಸಿಎಲ್ ಹಾಗೂ ಸಂಚಾರ ಪೊಲೀಸರೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸಂಕ್ರಾಂತಿ ವಿಶೇಷ ಪುಟ

Department of transport will decide on Bike-Taxi Soon

150 ಹೊಗೆ ತಪಾಸಣಾ ಕೇಂದ್ರಗಳಿಗೆ ದಂಡ: ವಾಹನಗಳಲ್ಲಿ ಕರ್ಕಶ ಶಬ್ದ ಮಾಡುವ ಹಾರನ್ ಅಳವಡಿಕೊಂಡಿರುವವರು ಹಾಗೂ ಶಬ್ದ ಮಾಲಿನ್ಯ ಮಾಡುವ ವಾಹನಗಳ ವಿರುದ್ಧ ನಿಯಮದನ್ವಯ ಪ್ರಕರಣ ದಾಖಲಿಸಿ, ವಾಹನಗಳ ಆರ್ ಸಿಯನ್ನು ಅಮಾನತು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂತೆಯೇ ನಿಯಮ ಉಲ್ಲಂಘಿಸಿರುವ ಹೊಗೆ ತಪಾಸಣಾ ಕೇಂದ್ರಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Transport Commissioner B.Dayanand said that Government is discussing about bike taxi issue and the permission will be given for the service soon.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ