ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಹಿಂಗಾರು ಚುರುಕು

|
Google Oneindia Kannada News

Recommended Video

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಹಿಂಗಾರು ಚುರುಕು | Oneindia Kannada

ಬೆಂಗಳೂರು, ನವೆಂಬರ್ 23: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದೆ. ಗುರುವಾರದಿಂದ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲೂ ಕೂಡ ತುಂತುರು ಮಳೆಯಾಗುತ್ತಿದೆ. ಚಾಮರಾಜನಗರದಲ್ಲಿ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು ಆಗಾಗ ತುಂತುರು ಮಳೆಯಾಗುತ್ತಿದೆ.

ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ

ಹಗಲು ಹೊತ್ತಿನಲ್ಲಿ ಸಣ್ಣ ಮಳೆಯಾಗುತ್ತಿದ್ದು, ಸಂಜೆಯಾಗುತ್ತಿದ್ದಂತೆ ಮಳಯ ಪ್ರಮಾಣ ಹೆಚ್ಚಾಗುತ್ತಿದೆ. ಇನ್ನೆರಡು ದಿನ ಸೂರ್ಯ ಕಾಣುವುದು ಅನುಮಾನವಾಗಿದೆ.

Depression in Bay of Bengal: Rainfall in Bengaluru and surrounding district

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇತ್ತೀಚೆಗೆ ಗಜ ಚಂಡ ಮಾರುತ ದಾಳಿ ಇಂದಾಗಿ ತಮಿಳುನಾಡು ತತ್ತರಿಸಿತ್ತು. 45 ಮಂದಿ ಮೃತಪಟ್ಟಿದ್ದರು. ಅಲ್ಲಿ ಗಜ ಚಂಡ ಮಾರುತ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಮಳೆಯಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ.

ತ್ಲಿ ಚಂಡಮಾರುತದ ಹೊಡೆತಕ್ಕೆ 62 ಬಲಿ, 8 ದಿನದಿಂದ ವಿದ್ಯುತ್ ಇಲ್ಲ ತ್ಲಿ ಚಂಡಮಾರುತದ ಹೊಡೆತಕ್ಕೆ 62 ಬಲಿ, 8 ದಿನದಿಂದ ವಿದ್ಯುತ್ ಇಲ್ಲ

ಅಕ್ಟೋಬರ್‌ನಿಂದ ಇಲ್ಲಿಯವರೆಗೆ ವಾಡಿಕೆಯಂತೆ 204.4 ಮಿಮೀ ಮಳೆಯಾಗಬೇಕಿತ್ತು ಆದರೆ ಈ ಬಾರಿ ಹಿಂಗಾರಿಗೆ ಅನುಕೂಲಕರವಾದ ವಾತಾವರಣೆ ಇಲ್ಲದಿರುವ ಕಾರಣ 89.3 ಮಿ ಮೀ ಮಳೆಯಾಗಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ 24.8ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 23.5ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 24.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಎರಡು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Following depression in Bay of Bengal rainfall occurred in south interior of the state including Bengaluru and surrounding districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X