ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗರಿಗೆದರಿದ ಚಟುವಟಿಕೆ:ಉಪ ಮೇಯರ್ ಆಯ್ಕೆಗೆ ಶೀಘ್ರ ದಿನಾಂಕ

|
Google Oneindia Kannada News

ಬೆಂಗಳೂರು, ನವೆಂಬರ್ 13: ಇತ್ತೀಚೆಗಷ್ಟೇ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನದ ನಂತರ ಖಾಲಿ ಇರುವ ಉಪ ಮೇಯರ್ ಸ್ಥಾನಕ್ಕೆ ಶೀಘ್ರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಆಯ್ಕೆ ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಆಯ್ಕೆ

ಜತೆಗೆ ಅವಧಿ ಪೂರ್ಣಗೊಂಡಿರುವ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆಯೂ ನಡೆಯಲಿದ್ದು ಚುನಾವಣಾಧಿಕಾರಿ ಶಿವಯೋಗಿ ಕಳಸದ ಇನ್ನೆರಡು ದಿನಗಳಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.

 ನೂತನ ಮೇಯರ್ ಗಂಗಾಂಬಿಕೆ ಎದುರಿಸಬೇಕಾದ ಸವಾಲುಗಳಿವು! ನೂತನ ಮೇಯರ್ ಗಂಗಾಂಬಿಕೆ ಎದುರಿಸಬೇಕಾದ ಸವಾಲುಗಳಿವು!

ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಸ್ಥಾಯಿ ಸಮಿತಿ ಹಂಚಿಕೆ ಕುರಿತಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಸಭೆ ಸೇರಲಿದ್ದಾರೆ. ಸಭೆಯಲ್ಲಿ ಯಾವ ಪಕ್ಷಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಹಾಗೂ ಯಾರಿಗೆ ಉಪ ಮೇಯರ್ ಸ್ಥಾನ ನೀಡಬೇಕು ಎನ್ನುವ ಕುರಿತು ಚರ್ಚೆ ನಡೆಸಲಿದ್ದಾರೆ.

ಉಪಮೇಯರ್ ರಮೀಳಾ ವಿಧಿವಶ: ಗಣ್ಯರು ಏನಂದರು?ಉಪಮೇಯರ್ ರಮೀಳಾ ವಿಧಿವಶ: ಗಣ್ಯರು ಏನಂದರು?

Deputy mayor election date to declare within a day or two

ಚುನಾವಣಾ ದಿನಾಂಕ ಪ್ರಕಟಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಈಗಾಗಲೇ ಪ್ರಾದೇಶಿಕ ಆಯುಕ್ತ ಮತ್ತು ಚುನಾವಣಾಧಿಕಾರಿ ಶಿವಯೋಗಿ ಕಳಸದ ಅವರಿಗೆ ಪತ್ರ ಬರೆದಿದ್ದಾರೆ. ನವೆಂಬರ್ 23ಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆಸಲು ನಿರ್ಧರಿಸಲಾಗಿದೆ.

English summary
Regional commissioner of Bangalore will be declared schedule for election to elect new deputy Mayor of BBMP. At the same time standing committee election will be held along with deputy Mayor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X