ಎಂಜಿ ರಸ್ತೆಯಲ್ಲಿ ಪ್ರತ್ಯಕ್ಷಳಾದ ಜೈಲು ಹಕ್ಕಿ ಶಶಿಕಲಾ!

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 21:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಜೈಲಿನಿಂದ ಹೊರಕ್ಕೆ ಹೋಗಲು ಅವಕಾಶ ನೀಡಲಾಗಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಅನ್ಯಾಯ ಬಗ್ಗೆ ಟ್ವೀಟ್ ಮಾಡಿದ ಡಿ ರೂಪಾಗೆ ಭಾರಿ ಬೆಂಬಲ

ಶಶಿಕಲಾ ಅವರು ಬುರ್ಖಾ ತೊಟ್ಟು, ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಓಡಾಡಿದ್ದಾರೆ ಎನ್ನುವುದಕ್ಕೆ ಸಾಕ್ಷಿಯೆಂಬಂತೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ.

DIG Roopa shares CCTV footage of Sasikala with ACB

ಡಿಐಜಿ ರೂಪಾ ಅವರು ಎಸಿಬಿಯ ತನಿಖಾಧಿಕಾರಿಗಲಿಗೆ ಸಲ್ಲಿಸಿರುವ ವರದಿಯಲ್ಲಿ ಸಿಸಿಟಿವಿ ದೃಶ್ಯಗಳು ಕೂಡಾ ಇವೆ.ಸಿಸಿಟಿವಿ ದೃಶ್ಯಾವಳಿಯಲ್ಲಿ ಶಶಿಕಲಾ ಮತ್ತು ಇಳವರಸಿ ಬ್ಯಾಗ್​ ಹಿಡಿದು ಸಾಮಾನ್ಯ ವಸ್ತ್ರದಲ್ಲಿ ಜೈಳಿನ ಒಳಗೆ ಪ್ರವೇಶಿಸುತ್ತಿರುವ ದೃಶ್ಯಗಳು ಸೆರೆಯಾಗಿವೆ. ಇದು ಶಶಿಕಲಾ ಮತ್ತು ಇಳವರಸಿ ಅವರಿಗೆ ಜೈಲಿನಿಂದ ಹೊರಗೆ ಹೋಗಲು ಜೈಲಿನ ಅಧಿಕಾರಿಗಳು ಅವಕಾಶ ನೀಡಿದ್ದಾರೆ ಎಂಬುದನ್ನು ಪುಷ್ಟಿಕರಿಸುತ್ತದೆ.

ಪರಪ್ಪನ ಅಗ್ರಹಾರದಲ್ಲಿ ನಡೆದಿರುವ ಭ್ರಷ್ಟಾಚಾರ, ಅಕ್ರಮಗಳನ್ನು ಬಯಲಿಗೆಳೆದ ಡಿಐಜಿ ರೂಪಾ ಅವರಿಗೆ ಈ ಬಗ್ಗೆ ಮಾಹಿತಿ ಒದಗಿಸುವಂತೆ ಎಸಿಬಿ ತಂಡವು ಜುಲೈ 31ರಂದು ಸಮನ್ಸ್ ನೀಡಿತ್ತು. ಎಸಿಬಿ ಎದುರು ವಿಚಾರಣೆಗೆ ಹಾಜರಾದ ರೂಪಾ ಅವರು ತಮ್ಮ ಬಳಿ ಇದ್ದ ದಾಖಲೆ, ಸಿಸಿಟಿವಿ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.

ಚಿನ್ನಮ್ಮನಿಗೆ 'ರಾಜಾತಿಥ್ಯ' ಫೋಟೋಗಳಲ್ಲಿ ಬಹಿರಂಗ

ಆದರೆ, ಶಶಿಕಲಾ ಹಾಗೂ ಇಳವರಸಿ ಅವರು ಯಾವ ಸಮಯದಲ್ಲಿ ಜೈಲಿನಿಂದ ಹೊರಕ್ಕೆ ಹೋದರು. ಎಂಜಿ ರಸ್ತೆಗೆ ಹೋಗಿ ಬಂದಿದ್ದು ನಿಜವೇ? ಎಂಬುದರ ಬಗ್ಗೆ ಇನ್ನೂ ತನಿಖೆ ನಡೆಯಬೇಕಿದೆ. ಈ ಹಿಂದೆ ಶಶಿಕಲಾ ಅವರಿಗೆ ಫೈವ್ ಸ್ಟಾರ್ ಸೌಲಭ್ಯ ನೀಡಿರುವ ಬಗ್ಗೆ ಚಿತ್ರಗಳು ಹರಿದಾಡಿದ್ದನ್ನು ಸ್ಮರಿಸಬಹುದು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
DIG Roopa has shared CCTV footage with ACB. This footage of Sasikala and Ilavarasi in which both were walking free from Parappana Agrahara jail and roaming around Bengaluru wearing a Burqa

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ