ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಾಯಿ ಗೌರಮ್ಮಗೆ ಐಟಿ ನೋಟಿಸ್, ವಿಚಾರಣೆ ಎದುರಿಸಿದ ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು, ಜನವರಿ 3: ಸಚಿವ ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಆದಾಯ ತೆರಿಗೆ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಐಟಿ ಇಲಾಖೆ ಕಚೇರಿಗೆ ಹಾಜರಾಗಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ನೋಟಿಸ್ ನೀಡಲಾಗಿತ್ತು.ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಡಿಕೆಶಿ ಮನೆ ಹಾಗೂ ಕೋಡಿಹಳ್ಳಿಯ ಡಿ.ಕೆ ಸುರೇಶ್ ಮನೆಗೆ ನಾಲ್ಕು ಜನ ಅಧಿಕಾರಿಗಳು ಬುಧವಾರ ಭೇಟಿ ನೀಡಿದ್ದರು.

ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಇಲಾಖೆ ನೋಟಿಸ್ ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಇಲಾಖೆ ನೋಟಿಸ್

ಅಂದು ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದರು, ಡಿಕೆಶಿವಕುಮಾರ್ ಅವರ ತಾಯಿ ಗೌರಮ್ಮ ಅವರು ಬೆಂಗಳೂರಿಗೆ ತೆರಳಿದ್ದು ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

DK Shivakumar faces another IT enquiry

ಸದ್ಯ ವಿಚಾರಣೆಗೆ ಐಟಿ ಪ್ರಧಾನ ಕಚೇರಿಗೆ ಹಾಜರಾಗಿರುವ ಸಚಿವ ಡಿ.ಕೆ ಶಿವಕುಮಾರ್ ಅವರ ವಿಚಾರಣೆ ನಡೆಸುತ್ತಿರುವ ಐಟಿ ಅಧಿಕಾರಿಗಳು ಮಧ್ಯಾಹ್ನ ಊಟಕ್ಕೆ ಬಿಡದೆ ಮಾಹಿತಿ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಮೊದಲಿಗೆ ಐಟಿ ಅಧಿಕಾರಿಗಳು ಕನಕಪುರದಲ್ಲಿನ ಮನೆಗೆ ಭೇಟಿ ನೀಡಿ ನಂತರ ಕೋಡಿಹಳ್ಳಿಯ ಮನೆ ಹಾಗೂ ದೊಡ್ಡ ಆಲಹಳ್ಳಿಯ ಮನೆಗೆ ತೆರಳಿದ್ದಾರೆ. ಆದರೆ ಎಲ್ಲೂ ಕೂಡಾ ಡಿಕೆಶಿ ತಾಯಿ ಗೌರಮ್ಮನವರು ಸಿಗದ ಹಿನ್ನೆಲೆಯಲ್ಲಿ ನೋಟಿಸನ್ನು ಬಾಗಿಲಿಗೆ ಅಂಟಿಸಿ ಹೋಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Senior minister DK Shivakumar attended IT department enquiry after his mother gets notice from the department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X