ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸದನ ಸಮಿತಿ ವರದಿ ಸಹಿಗಾಗಿ ಎಚ್ ಡಿಕೆ ಭೇಟಿ ಮಾಡಿದ ಡಿಕೆಶಿ

|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿದ ಡಿ ಕೆ ಶಿವಕುಮಾರ್ | Oneindia Kannada

ಬೆಂಗಳೂರು, ಅಕ್ಟೋಬರ್ 27: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನೆಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ ವಿಚಾರ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರಿನ ಜೆಪಿ ನಗರದ ಕುಮಾರಸ್ವಾಮಿ ಮನೆಗೆ ಭೇಟಿ ನೀಡಿದ ಶಿವಕುಮಾರ್, ರಾಜಕೀಯ ವಿಚಾರ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಆರೋಪದ ಬಗ್ಗೆ ಯಾವುದೇ ಮಾಧ್ಯಮದಲ್ಲಿ ಚರ್ಚೆಗೆ ಸಿದ್ಧ: ಡಿಕೆಶಿಯಡಿಯೂರಪ್ಪ ಆರೋಪದ ಬಗ್ಗೆ ಯಾವುದೇ ಮಾಧ್ಯಮದಲ್ಲಿ ಚರ್ಚೆಗೆ ಸಿದ್ಧ: ಡಿಕೆಶಿ

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ವಿದ್ಯುತ್​ ಖರೀದಿ ಹಗರಣದ ಸಂಬಂಧ ಸದನ ಸಮಿತಿಯ ವರದಿ ಅಕ್ಟೋಬರ್ 30ರಂದು ಸಲ್ಲಿಸಬೇಕಿದ್ದು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ಸದನ ಸಮಿತಿ ವರದಿ ಸಲ್ಲಿಸುವ ವೇಳೆ ಎಲ್ಲಾ ಸದಸ್ಯರ ಸಹಿ ಅಗತ್ಯ. ಆದ್ದರಿಂದ ಸಮಿತಿಯ ಸದಸ್ಯರಾದ ಎಚ್.ಡಿ.ಕುಮಾರಸ್ವಾಮಿ ಸಹಿ ಪಡೆಯಲು ತೆರಳಿದ್ದರು.

DK Shivakumar- HD Kumaraswamy

ಈ ಹಿಂದೆ ಸದನ ಸಮಿತಿ ಸದಸ್ಯ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದರು. ಆದರೆ ರಾಜೀನಾಮೆ ಅಂಗೀಕಾರವಾಗಿರಲಿಲ್ಲ. ಸದಸ್ಯರಾಗಿ ಎಚ್​ ​ಡಿಕೆ ಮುಂದುವರಿದಿರುವ ಕಾರಣ ವರದಿಗೆ ಸಹಿ ಅಗತ್ಯವಿತ್ತು. ಆದ್ದರಿಂದ ಕುಮಾರಸ್ವಾಮಿ ಮನೆಗೆ ಭೇಟಿ ನೀಡಿ, ಸಹಿ ಪಡೆದರು. ಆ ನಂತರ ಆರೋಗ್ಯದ ಬಗ್ಗೆ ವಿಚಾರಿಸಿದರು ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ತವರು ಕ್ಷೇತ್ರದಿಂದ ಎಚ್‌ಡಿಕೆ ರಾಜ್ಯ ಪ್ರವಾಸ ಆರಂಭ!ಸಿದ್ದರಾಮಯ್ಯ ತವರು ಕ್ಷೇತ್ರದಿಂದ ಎಚ್‌ಡಿಕೆ ರಾಜ್ಯ ಪ್ರವಾಸ ಆರಂಭ!

ಭೇಟಿ ನಂತರ ಹೇಳಿಕೆ ನೀಡಿದ ಕುಮಾರಸ್ವಾಮಿ, ಸದನ ಸಮಿತಿಯ ವರದಿಯನ್ನು ಹೊರತುಪಡಿಸಿ ಯಾವುದೇ ರಾಜಕೀಯ ವಿಚಾರದ ಚರ್ಚೆ ನಡೆಸಿಲ್ಲ ಎಂದಿದ್ದಾರೆ.

English summary
Power minister DK Shivakumar meets HD Kumaraswamy at his residence in Bengaluru. To get sign for a report about allegation of irregularities in electricity purchase in BJP government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X