ಡಿಕೆಶಿ ಬೆಂಬಲಿಗ, ಐಟಿ ದಾಳಿಗೆ ಗುರಿಯಾಗಿದ್ದ ವರಪ್ರಸಾದ್ ರೆಡ್ಡಿ ಬಿಜೆಪಿಗೆ

Subscribe to Oneindia Kannada

ಬೆಂಗಳೂರು, ಆಗಸ್ಟ್ 28: ಇಂಧನ ಸಚಿವ ಡಿಕೆ ಶಿವಕುಮಾರ್ ಕಟ್ಟಾ ಬೆಂಬಲಿಗ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ವರಪ್ರಸಾದ್ ರೆಡ್ಡಿ ಭಾನುವಾರ ಅಧಿಕೃತವಾಗಿ ಬಿಜೆಪಿ ಸೇರಿದರು.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಬೆಂಬಲಿಗರೊಂದಿಗೆ ವರಪ್ರಸಾದ್ ರೆಡ್ಡಿ ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

   DK shivakumar says i will be next cm in Karnataka | Oneindia Kannada
   DK Shivakumar’s follower Varaprasad Reddy officially joined BJP on Sunday

   ಈ ವೇಳೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಶಾಸಕ ಸಿ.ಟಿ.ರವಿ, ಬಿಜೆಪಿ ರಾಜ್ಯ ಸಂಘಟನಾ ಉಸ್ತುವಾರಿ ಮುರಳೀಧರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

   ಯಾರು ಈ ವರಪ್ರಸಾದ್ ರೆಡ್ಡಿ?

   ವರಪ್ರಸಾದ್ ರೆಡ್ಡಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ರೆಡ್ಡಿ, ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಕಟ್ಟಾ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

   ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ವರಪ್ರಸಾದ್ ರೆಡ್ಡಿ ಉತ್ತರಹಳ್ಳಿ ವಾರ್ಡ್‍ನಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

   ಮೊನ್ನೆ ಮೊನ್ನೆ ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರು ಮತ್ತು ಆಪ್ತರ ಮೇಲೆ ಐಟಿ ದಾಳಿ ನಡೆದಾಗ ವರಪ್ರಸಾದ್ ರೆಡ್ಡಿ ಮನೆ ಮೇಲೆಯೂ ದಾಳಿ ನಡೆದಿತ್ತು.

   ಡಿಕೆ ಶಿವಕುಮಾರ್ ರಾಜೀನಾಮೆಗೆ ಪಟ್ಟು ಹಿಡಿಯುತ್ತಿರುವ ಬಿಜೆಪಿ ಇದೆ ವೇಳೆ ವರಪ್ರಸಾದ್ ರೆಡ್ಡಿಯವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವುದು ಹಲವರನ್ನು ಅಚ್ಚರಿಗೆ ತಳ್ಳಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Energy Minister DK Shivakumar’s follower and real estate tycoon Varaprasad Reddy officially joined BJP on Sunday in Malleswaram BJP office.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

   X