• search
For bengaluru Updates
Allow Notification  

  ಮಹದಾಯಿ ವಿಚಾರದಲ್ಲಿ ರಾಜಕೀಯ ಆಟ ಬೇಡ: ಡಿಕೆಶಿ ಮನವಿ

  By Nayana
  |

  ಬೆಂಗಳೂರು, ಆಗಸ್ಟ್ 28: ಮಹದಾಯಿ ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ, ಜನರಲ್ಲಿ ಭರವಸೆ ಮೂಡಿಸುವಂತಹ ಮಾತುಗಳನ್ನು ಆಡಿ ಅದರ ಬದಲು ರಾಜಕೀಯ ಮಾಡಬೇಡಿ ಎಂದು ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದರು.

  ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ವಾರದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಪರಿಶೀಲನೆಗೆ ಬರಲಿದ್ದಾರೆ, ಅವರ ಜೊತೆ ಸಭೆ ನಡೆಸಿದ ಬಳಿಕ ಗೋವಾ ಎನ್‌ಜಿಟಿಗೆ ಹೋಗುವ ವಿಚಾರ ಅಥವಾ ಮುಂದಿನ ಹೋರಾಟದ ಬಗ್ಗೆ ಸಿದ್ಧತೆ ಮಾಡಲಾಗುತ್ತದೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಹೇಳಿದರು.

  ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ

  ಗೋವಾದ ಜೀವನದಿಯಾಗಿರುವ ಮಾಂಡೋವಿ-ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಮೂರು ದಶಕಗಳಿಗೂ ಅಧಿಕ ವರ್ಷಗಳಿಂದ ಇದೆ, ಮಹದಾಯಿ ಯೋಜನೆ ಕಾಲಾನುಕ್ರಮದಲ್ಲಿ ನಡೆದ ಬೆಳವಣಿಗೆಗಳತ್ತ ಅವಲೋಕನ ಮಾಡಲಾಗಿದೆ.

  ಕಳಸಾ ಬಂಡೂರಿ ನಾಲೆ ಕಾಮಗಾರಿಗೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತರು ಮುಷ್ಕರ ನಿರತರಾಗಿ ವರ್ಷ ಕಳೆದಿದೆ. ಸರ್ಕಾರಗಳು ಬದಲಾದರೂ ಕುಡಿಯುವ ನೀರಿಗಾಗಿ ಹೋರಾಟ ನಿಂತಿಲ್ಲ.

  ಮಹದಾಯಿ ನ್ಯಾಯಾಧಿಕರಣದ ಅಂತಿಮ ತೀರ್ಪು ಮಂಗಳವಾರ ಪ್ರಕಟವಾಗಿದೆ. ಕರ್ನಾಟಕಕ್ಕೆ 13.42 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಇದು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಜಲ ವಿವಾದ. ನ್ಯಾಯಮೂರ್ತಿ ಜೆ.ಎಂ.ಪಾಂಚಾಲ್ ನೇತೃತ್ವದ ನ್ಯಾಯಾಧಿಕರಣ ಅಂತಿಮ ತೀರ್ಪನ್ನು ಪ್ರಕಟಿಸಿದೆ.

  ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

  ಕರ್ನಾಟಕಕ್ಕೆ 13.42, ಗೋವಾ ರಾಜ್ಯಕ್ಕೆ 24 ಮತ್ತು ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರನ್ನು ನ್ಯಾಯಾಧೀಕರಣ ಹಂಚಿಕೆ ಮಾಡಿದೆ.ಆದರೆ, ಕರ್ನಾಟಕಕ್ಕೆ ಇನ್ನೂ 7 ಟಿಎಂಸಿ ನೀರು ಸಿಗಬೇಕಿತ್ತು ಎಂಬ ಬೇಡಿಕೆ ಇದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  ಇನ್ನಷ್ಟು ಬೆಂಗಳೂರು ಸುದ್ದಿಗಳುView All

  English summary
  Water resources minister D.K.Shivakumar has appealed to political parties and farmer leaders shouldn't be played politics over Mahadayi row.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more