ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಾಯಿ, ತಂಗಿಗೆ ಇಂಜೆಕ್ಷನ್‌ ಕೊಟ್ಟು ಕೊಲೆ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

|
Google Oneindia Kannada News

ಬೆಂಗಳೂರು, ಡಿಸೆಂಬರ್ 1: ವೈದ್ಯನೊಬ್ಬ ತಾಯಿ ಹಾಗೂ ತಂಗಿಗೆ ಇಂಜೆಕ್ಷನ್ ಕೊಟ್ಟು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಶನಿವಾರ ನಡೆದಿದೆ.

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ಡಾ.ಗೋವಿಂದ ಪ್ರಕಾಶ್​ ಕೃತ್ಯ ಎಸಗಿದ್ದು, ತಾಯಿ ಮೂಕಾಂಬಿಕಾ (75), ತಂಗಿ ಶ್ಯಾಮಲಾ (40)ಗೆ ಇಂಜೆಕ್ಷನ್​ ಕೊಟ್ಟು ಹತ್ಯೆ ಮಾಡಿದ್ದಾನೆ. ನಂತರ ತಾನೂ ಚುಚ್ಚಿಕೊಂಡಿದ್ದಾನೆ. ಗಾಯಾಳು ವೈದ್ಯನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ

ಡಾ. ಗೋವಿಂದ ಪ್ರಕಾಶ್ ಡೆತ್​ನೋಟ್​ ಬರೆದಿಟ್ಟಿದ್ದು, ಅನಾರೋಗ್ಯದ ಕಾರಣದಿಂದ ಇನ್ಸುಲಿನ್​ ಇಂಜೆಕ್ಷನ್​ ಚುಚ್ಚಿಕೊಂಡು ಸಾಯುತ್ತಿರುವುದಾಗಿ ತಿಳಿಸಿದ್ದಾನೆ. ಈತ ಬಿಜಿಎಸ್​ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಆರ್​.ಆರ್​.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Dooctor attempts suicide in Bengaluru

ತಾಯಿ ಬಿಪಿ ಮತ್ತು ಶುಗರ್ ನಿಂದ ಬಳಲುತ್ತಿದ್ದರು. ಇತ್ತ ತಂಗಿಗೆ ಮದುವೆ ಆಗಿಲ್ಲ ಎನ್ನುವ ಚಿಂತೆ ಗೋವಿಂದರಾಜುವನ್ನು ಕಾಡುತ್ತಿತ್ತು. ಒಬ್ಬಳೇ ತಂಗಿಗೆ ಮದುವೆ ಮಾಡಲಿಲ್ಲ ಎಂದು ಜಿಗುಪ್ಸೆಗೆ ಒಳಗಾಗಿದ್ದರಂತೆ. ಇತ್ತ ಪತ್ನಿಯನ್ನು ಕಳೆದುಕೊಂಡಿದ್ದ ಗೋವಿಂದರಾಜುವಿಗೆ ಮಕ್ಕಳಿರಲಿಲ್ಲ. ಆರ್.ಆರ್.ನಗರದಲ್ಲಿ ಆಸ್ಪತ್ರೆ ತೆರೆದು ಜೀವನ ನಡೆಸುತ್ತಿದ್ದರೂ, ನಿರೀಕ್ಷಿತ ಆದಾಯ ಬರುತ್ತಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ

ಈ ಎಲ್ಲ ತೊಂದರೆಗಳಿಂದ ಬೇಸತ್ತ ಗೋವಿಂದರಾಜು ತಾಯಿ ಮತ್ತು ತಂಗಿಗೆ ಓವರ್ ಡೋಸ್ ಇನ್ಸುಲಿನ್ ಇಂಜೆಕ್ಷನ್ ಚುಚ್ಚಿ, ತಾನು ಅದೇ ರೀತಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗೋವಿಂದರಾಜು ಸಂಬಂಧಿಕರು ಫೋನ್ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಸಿಗದೇ ಇದ್ದಾಗ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Dooctor attempted suicide over depression after killing his mother sister in rr nagar Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X