ಬೆಂಗಳೂರು ಪದವೀಧರರ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 23 : ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರನ್ನು ಘೋಷಿಸಲಾಗಿದೆ.

ಅಸೆಂಬ್ಲಿ ಚುನಾವಣೆ: ಬೆಂಗಳೂರು ನಗರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳು?

ಬೆಂಗಳೂರು ನಗರ ಜಿಲ್ಲಾ ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಡಾ. ರಾಮೋಜಿ ಗೌಡ ಅವರನ್ನು ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಡ್ ಅಯ್ಕೆ ಮಾಡಿದೆ.

Dr.Ramoji Gowda is the Congress candidate for Bangaluru graduate constituency

ಹಲವಾರು ವರ್ಷಗಳಿಂದ ಶಿಕ್ಷಕರು ಹಾಗೂ ಪದವೀಧರರ ನಾಯಕರಾಗಿ ಗುರುತಿಸಿಕೊಂಡಿರುವ ಡಾ. ರಾಮೋಜಿ ಗೌಡ ಅವರನ್ನು ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಡ್ ಅಯ್ಕೆ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ಧನ ದ್ವಿವೇದಿ ತಿಳಿಸಿದ್ದಾರೆ.

ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಡಾ ರಾಮೋಜಿ ಗೌಡ, ಕಾಂಗ್ರೆಸ್ ಹೈಕಮಾಂಡ್ ಗೆ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷ ತಮ್ಮ ಸೇವೆಯನ್ನು ಗುರುತಿಸಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress high command selected Dr.Ramoji Gowda has the Congress candidate for Bangaluru graduate constituency, said AICC general secretary Janardhana Dwivedi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ