ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕಾರ್ಮಿಕರು ಚುನಾವಣೆಯಲ್ಲಿ ಭಾಗವಹಿಸಲು ಸಂಪೂರ್ಣ ಅವಕಾಶ'

|
Google Oneindia Kannada News

ಬೆಂಗಳೂರು, ಏಪ್ರಿಲ್ 21 : ಚುನಾವಣಾ ಪ್ರಕ್ರಿಯೆಯಲ್ಲಿ ಕೈಗಾರಿಕೆಗಳು ಪಾಲುದಾರರಾಗಿರುವುದರಿಂದ ಕಾರ್ಮಿಕರು ಚುನಾವಣೆಯಲ್ಲಿ ಭಾಗವಹಿಸಲು ಸಂಪೂರ್ಣ ಅವಕಾಶ ನೀಡಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕರೆ ನೀಡಿದರು.

ಮತದಾನದ ಅವಧಿ 1 ಗಂಟೆ ಹೆಚ್ಚಳ: ಸಂಜೀವ್ ಕುಮಾರ್ಮತದಾನದ ಅವಧಿ 1 ಗಂಟೆ ಹೆಚ್ಚಳ: ಸಂಜೀವ್ ಕುಮಾರ್

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯಲ್ಲಿ (ಎಫ್‍ಕೆಸಿಸಿಐ) ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಥಮವಾಗಿ ಬಳಕೆಯಾಗುತ್ತಿರುವ ವಿವಿಪ್ಯಾಟ್ ಯಂತ್ರಗಳು ಅತ್ಯಂತ ಸುರಕ್ಷಿತ ಎಂದು ತಿಳಿಸಿದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

​ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಮತದಾನದ ಅನುಪಾತ ಅತ್ಯಂತ ಕಡಿಮೆಯಿದೆ. ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಎಲ್ಲ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ ಎಂದರು.

EC appeals to labourers to tender their vote without fail

ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕುರಿತು ಅನೇಕ ತಪ್ಪು ಅಭಿಪ್ರಾಯಗಳು ಜನರಲ್ಲಿವೆ. ಕಾನೂನಿನ ಪರಿಧಿಯಲ್ಲಿಯೇ ಕಾರ್ಯರ್ವಹಿಸುವುದು ಎಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದರು.

ಉಪಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ಇವಿಎಂ-ವಿವಿಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಅಪರ ಮುಖ್ಯ ಚುನಾವಣಾಧಿಕಾರಿ ಡಾ. ಬಿ.ಆರ್.ಮಮತಾ, ಎಫ್‍ಕೆಸಿಸಿಐ ಅಧ್ಯಕ್ಷ ಕೆ.ರವಿ , ನಾಗರೀಕ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಡಾ ಬಿ.ಅಮರನಾಥ, ಉಪಾಧ್ಯಕ್ಷ ಸಿ.ಆರ್.ಜನಾರ್ಧನ್ ಉಪಸ್ಥಿತರಿದ್ದರು.

English summary
State chief election officer Sanjeev Kumar urged industrialists to make avail laborers to tender their votes on polling day by giving leave or flexible time for them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X