ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು 'ಆರಂಭ'

|
Google Oneindia Kannada News

ಬೆಂಗಳೂರು, ಜನವರಿ 16: ಅಪಾರ್ಟ್ ಮೆಂಟ್ ಗಳಲ್ಲಿ ಎಸ್ಟಿ ಪಿ ಅಳವಡಿಕೆ ಕಡ್ಡಾಯದ ವಿರುದ್ಧ ನಿರಂತರವಾಗಿ ಹೋರಾಟ ಮಾಡಿ ಜಯ ಗಳಿಸಿರುವ ಬೆಂಗಳೂರು ಅಪಾರ್ಟ್ ಮೆಂಟ್ ಫೆಡರೇಷನ್ ಇದೀಗ 'ಆರಂಭ' ಎನ್ನುವ ಅಭಿಯಾನ ಹಮ್ಮಿಕೊಂಡಿದೆ.

ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಜನವರಿ 22 ಕೊನೆಯ ದಿನವಾಗಿದೆ ಹಾಗಾಗಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು 'ಆರಂಭ' ಎಂಬ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಸಿದೆ. ಮುಂಬರುವ ವಿಧಾನ ಸಭಾ ಚುನಾವಣೆಗಾಗಿ ಪಟ್ಟಿಗೆ ಹೆಸರು ಸೇರಿಸಲು ಅಪಾರ್ಟ್ ಮೆಂಟ್ ಸಮುಚ್ಛಯಗಳ ಸಾವಿರಾರು ಮಂದಿ ಪ್ರಯತ್ನಿಸುತ್ತಿದ್ದಾರೆ.

Enrollment for electoral process campaign

ಮುಖ್ಯ ಚುನಾವಣಾಧಿಕಾರಿ ಅವರನ್ನು ಕಳೆದ ವಾರ ಭೇಟಿಯಾಗಿ ಮನವಿ ಮಾಡಿದ್ದೇವೆ, ಅಪಾರ್ಟ್ ಮೆಂಟ್ ಸಮುಚ್ಛಯಗಳಲ್ಲಿ ಮತದಾರರ ನೋಂದಣಿ ಶಿಬಿರ ಹಮ್ಮಿಕೊಳ್ಳಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಈ ವಾರಾಂತ್ಯದಲ್ಲಿ ಶಿಬಿರ ಹಮ್ಮಿಕೊಳ್ಳುತ್ತೇನೆ ಎಂದು ಅಪಾರ್ಟ್ ಮೆಂಟ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ತಿಳಿಸಿದ್ದಾರೆ.

English summary
Bengaluru Apartment Federation is organising enrollment for electoral list campaign as Arambha' till 22, January. Federation general secretary Srikanth Narasimhan told that the federation members will go door to door for enrollment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X