ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕನ್ನಡ ನಾಮಫಲಕ ಹಾಕಿ, ಇಲ್ಲದಿದ್ದರೆ ದಂಡ ಕಟ್ಟಿ'

|
Google Oneindia Kannada News

ಬೆಂಗಳೂರು, ಆಗಸ್ಟ್ 10 : ನಗರದ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಇರುವಂತೆ ನೋಡಿಕೊಳ್ಳಲು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದೆ.

6 ತಿಂಗಳೊಳಗೆ ಕನ್ನಡ ಕಲಿಯದಿದ್ದರೆ ಕರ್ತವ್ಯದಿಂದ ಬಿಡುಗಡೆ6 ತಿಂಗಳೊಳಗೆ ಕನ್ನಡ ಕಲಿಯದಿದ್ದರೆ ಕರ್ತವ್ಯದಿಂದ ಬಿಡುಗಡೆ

ಕನ್ನಡದಲ್ಲಿ ನಾಮಫಲಕ ನಿಯಮ ಜಾರಿಗೆ ತರಲು 20 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಈ ನಿಯಮವನ್ನು ಪಾಲಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ನಗರ ಜಿಲ್ಲಾಧಿಕಾರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದ್ದಾರೆ.

Ensure Kannada sign boards or face fine, KDA tells officials

ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಹಾಕಿಸಲು ಒಂದು ತಿಂಗಳ ಕಾಲಾವಕಾಶವನ್ನು ಪಾಲಿಕೆ ಅಧಿಕಾರಿಗಳಿಗೆ ನೀಡಲಾಗಿದೆ. ಕನ್ನಡದಲ್ಲಿ ನಾಮಫಲಕ ಹಾಕದಿರುವ ಅಂಗಡಿಗಳ ಅನುಮತಿಯನ್ನು ರದ್ದು ಮಾಡುವ ಅಧಿಕಾರ ಬಿಬಿಎಂಪಿಗೆ ಇದೆ ಎಂದು ಅವರು ಹೇಳಿದರು.

ಹಾಗೂ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆಯೇ ಎಂಬುವುದನ್ನು ತಿಳಿದುಕೊಳ್ಳಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರೊ.ಎಸ್.ಜಿ.ಸಿದ್ದರಾಮಯ್ಯ ತಿಳಿಸಿದರು.

English summary
The Kannada Development Authority (KDA) has instructed the Bengaluru Urban Deputy Commissioner’s office to ensure that shops coming under its jurisdiction sport Kannada language as well in their sign boards.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X