ಈಶ್ವರಪ್ಪ ಪಿಎ ಅಪಹರಣ ಯತ್ನ, ಎನ್.ಆರ್.ಸಂತೋಷ್ ವಿಚಾರಣೆ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 21 : ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕರಾಗಿದ್ದ ವಿನಯ್ ಅಪಹರಣ ಯತ್ನ ಪ್ರಕರಣದ ವಿಚಾರಣೆ ಅಂತಿಮ ಹಂತಕ್ಕೆ ಬಂದಿದೆ. ಮುಂದಿನ ವಾರದಲ್ಲಿ ಚಾರ್ಜ್ ಶೀಟ್‌ ಸಲ್ಲಿಕೆಯಾಗಲಿದ್ದು, ಇಂದು ಎನ್.ಆರ್.ಸಂತೋಷ್ ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು.

ಜಾಮೀನು ರದ್ಧತಿ ಅರ್ಜಿ ವಿಚಾರಣೆ ಮುಂದೂಡಿಕೆ, ಸಂತೋಷ್‌ಗೆ ರಿಲೀಫ್

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್‌ ವಿಚಾರಣೆಗೆ ಗೈರು ಹಾಜರಾಗುತ್ತಿದ್ದರು. ಇಂದು ಪೊಲೀಸರ ಮುಂದೆ ಹಾಜರಾಗದಿದ್ದರೆ ನಿರೀಕ್ಷಣಾ ಜಾಮೀನು ರದ್ದು ಮಾಡುವುದುದಾಗಿ ಕೋರ್ಟ್ ಎಚ್ಚರಿಕೆ ಕೊಟ್ಟಿತ್ತು.

Eshwarappa PA kidnap attempt case : Police to file charge sheet

ಮಂಗಳವಾರ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಎ.ಆರ್.ಬಡಿಗೇರ್ ಮುಂದೆ ಸಂತೋಷ್ ವಿಚಾರಣೆಗೆ ಹಾಜರಾಗಿದ್ದರು. ಮಹಾಲಕ್ಷ್ಮೀಪುರ ಪೊಲೀಸ್ ಠಾಣೆ ಪಕ್ಕದ ಎಸಿಪಿ ಕಚೇರಿಯಲ್ಲಿ ವಿಚಾರಣೆ ನಡೆಯಿತು.

ಕೆಎಸ್ ಈಶ್ವರಪ್ಪ ಅವರ ಪಿಎ ವಿನಯ್ ರನ್ನು ಅಪಹರಿಸಲು ಯತ್ನ

ಸಂತೋಷ್ ಮೊಬೈಲ್‌ ಪೋನ್‌ ಅನ್ನು ಪೊಲೀಸರು ವಶಕ್ಕೆ ನೀಡುವಂತೆ ಕೇಳಿದ್ದಾರೆ. ಪ್ರಕರಣದ ವಿಚಾರಣೆಯನ್ನು ಪೊಲೀಸರು ಅಂತ್ಯಗೊಳಿಸಿದ್ದು, ಮುಂದಿನ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಸಂತೋಷ್

ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಸಂತೋಷ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಂತೋಷ್ ವಿಚಾರಣೆಗೆ ಹಾಜರಾಗುತ್ತಿಲ್ಲ ಅವರ ಜಾಮೀನು ರದ್ದುಗೊಳಿಸಿ ಎಂದು ಪೊಲೀಸರು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mahalakshmi layout police to file charge sheet soon on K.S.Eshwarappa personal assistant Vinay kidnap attempt case. N.R.Santosh is the main accused in the case. Santosh personal assistant of B.S.Yeddyurapa.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ