ಎಸ್ಸೆಂ ಕೃಷ್ಣ ಮೊಮ್ಮಗ ನಿರಂತರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 19 : ಇತ್ತೀಚೆಗಷ್ಟೆ ಬಿಜೆಪಿ ಸೇರಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ ಡಾ|| ನಿರಂತರ ಗಣೇಶ್ ಅವರು 30 ಕ್ಕೂ ಹೆಚ್ಚು ವೈದ್ಯರೊಂದಿಗೆ ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಾ.ನಿರಂತರ್ ಗಣೇಶ್ ಮತ್ತು ಇತರರನ್ನು ಪಕ್ಷಕ್ಕೆ ಬರಮಾಡಿಕೊಂಡರು.[ಕಾಂಗ್ರೆಸ್ ಸೇರಲಿರುವ ಎಸ್ಸೆಂ ಕೃಷ್ಣ ಅವರ ಮೊಮ್ಮಗ ನಿರಂತರ್]

EX CM SM krishna's grandson DR Nirantar Ganesh joins congress in Bengaluru on April 19

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿರಂತರ್ ಗಣೇಶ್ ಅವರು, "ನಾನು ಯಾವುದೇ ಷರತ್ತು ಅಥವಾ ನಿರೀಕ್ಷೆಗಳನ್ನು ಇಟ್ಟುಕೊಂಡು ಪಕ್ಷ ಸೇರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಗಳಿಂದ ಪ್ರೇರಿತನಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದರು".

ನಿರಂತರ ಗಣೇಶ್ ಅವರು ಎಂಎಸ್ ರಾಮಯ್ಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ ಡಾಕ್ಟರ್ ಆಗಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka EX CM, BJP leader SM krishna's grandson DR Nirantar Ganesh joins congress on April 19 at Bengaluru Karnataka Pradesh Congress Committee.
Please Wait while comments are loading...