ಕೆ.ಆರ್.ಮಾರ್ಕೆಟ್: ತೆರಿಗೆ ಹೆಸರಲ್ಲಿ ರೈತರ ಸುಲಿಗೆ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 04: ಕೆ.ಆರ್.ಮಾರುಕಟ್ಟೆಯಲ್ಲಿ ರೈತರ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಬೆಂ.ಗ್ರಾಮಾಂತರ ಜಿಲ್ಲೆ ರೈತರು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಭತ್ತದ ಬೆಳೆಯಲ್ಲಿ ಸೈನಿಕ ಹುಳುವಿನ ಹಾವಳಿ

ರೈತರು ಬೆಳೆದ ಬೆಳೆಯನ್ನು ಕೆ.ಆರ್.ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಮಾರುಕಟ್ಟೆ ತೆರಿಗೆ ಹೆಸರಲ್ಲಿ ಹಫ್ತಾ ವಸೂಲಿ ಮಾಡಲಾಗುತ್ತಿದೆ. ತೆರಿಗೆ ನೀಡಲು ನಿರಾಕರಿಸಿದ ರೈತರ ಮೇಲೆ ಗೂಂಡಾಗಿರಿ ನೆಡಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Farmers siege BBMP office in demand for cancel tax in K.R.Market

ಮಾರುಕಟ್ಟೆಯಲ್ಲಿ ರೈತರಿಗೆ ಮೀಸಲಾಗಿದ್ದ ಶೆಡ್‌ಗಳನ್ನು ಬಿಬಿಎಂಪಿಯು ತನ್ನ ಲಾಭಕ್ಕಾಗಿ ಕೋಟ್ಯಾಂತರ ರೂಪಾಯಿಗಳಿಗೆ ಖಾಸಗಿಯವರಿಗೆ ಹರಾಜು ಮಾಡಿದ್ದಾರೆ, ಬಂಡವಾಳ ಹೂಡಿದ ಖಾಸಗಿಯವರು ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ ಆರೋಪಿಸಿದರು.

ರಾಜ್ಯದಲ್ಲಿ ದೇಶದ ಪ್ರಪ್ರಥಮ ಕೃಷಿ ಬೆಲೆ ಆಯೋಗ ಅಸ್ತಿತ್ವಕ್ಕೆ

ಬಯಲು ಸೀಮೆ ರೈತರು 1500 ಅಡಿ ಆಳದಿಂದ ನೀರು ತೆಗೆದು ತರಕಾರಿ ಬೆಳೆಗಳನ್ನು ಬೆಳೆಯುತ್ತಾರೆ, ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ತರುವಷ್ಟರಲ್ಲಿ ರೈತನಿಗೆ ಕತ್ತಿನ ವರೆಗೆ ಸಾಲ ಇರುತ್ತದೆ. ಅಲ್ಪ ಸ್ವಲ್ಪ ಹಣ ಮಾಡಿಕೊಳ್ಳುವ ಆಸೆಯಿಂದ ಬಂದ ರೈತನಿಂದ ತೆರಿಗೆ ಹೆಸರಲ್ಲಿ ಹಣ ಕೀಳುತ್ತಿರುವುದು ಅಕ್ಷಮ್ಯ ಎಂದು ಆರೋಪಿಸಿದ ಅವರು ಬಿಬಿಎಂಪಿ ಈ ವಸೂಲಿದಾರರಿಗೆ ಅಭಯ ನೀಡಿದೆ ಎಂದರು.

ಬಿಬಿಎಂಪಿಗೆ ಮುತ್ತಿಗೆ ಹಾಕಿ ರೈತರಿಂದ ವಸೂಲಿ ಮಾಡುತ್ತಿರುವ ತೆರಿಗೆಯನ್ನು ಕೈಬಿಡಬೇಕೆಂದು ಆಗ್ರಹಿಸುತ್ತಿರುವುದಾಗಿ ಅವರು ಮಾಹಿತಿ ನೀಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Farmers siege BBMP office in demand for cancel tax in K.R.Market. Private people who purchased K.R.Market sheds in Bidding they taking money from Farmers as tax.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ