ಬೆಂಗಳೂರಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಖಚಿತ!

Posted By: Nayana
Subscribe to Oneindia Kannada

ಬೆಂಗಳೂರು, ಡಿಸೆಂಬರ್ 27 : ಸಾಕಷ್ಟು ವಿವಾದ ಎಬ್ಬಿಸಿದ್ದ ಉಕ್ಕಿನ ಸೇತುವೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ತಲೆ ಎತ್ತುತ್ತಿದೆ.ಶಿವಾನಂದ ವೃತ್ತದಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕಾಗಿ ನಡೆಸಿದ ಮಣ್ಣಿನ ಪರೀಕ್ಷೆ ಯಶಸ್ವಿಯಾಗಿದ್ದು ಶೀಘ್ರವೇ ಸೇತುವೆ ನಿರ್ಮಾಣವಾಗಲಿದೆ.

ಶಿವಾನಂದ ಸರ್ಕಲ್ ಮೇಲ್ಸೇತುವೆ ವಿರುದ್ಧದ ಪಿಐಎಲ್ ವಜಾ!

ಸದ್ಯದಲ್ಲೇ ಕಾಮಗಾರಿಗೆ ಚಾಲನೆ ನೀಡಲು ಬಿಬಿಎಂಪಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸ್ಟೀಲ್​ ಫ್ಲೈಓವರ್​ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಶಿವಾನಂದ ವೃತ್ತ ಬಳಿ ಮಣ್ಣನ್ನು ಪರಿಶೀಲನೆಗೆ ಒಳಪಡಿಸಲಾಗಿತ್ತು. 14.48 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಕಾಮಗಾರಿ ಪ್ರಾರಂಭಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

Finally, steel bridge in Bengaluru

ಏರ್ ಪೋರ್ಟ್ ರಸ್ತೆಯಲ್ಲಿ ನಿರ್ಮಿಸಲು ಹೊರಟಿದ್ದ ಉಕ್ಕಿನ ಸೇತುವೆ ಸಾಕಷ್ಟು ವಿವಾದ ಎಬ್ಬಿಸಿತ್ತು. ಪರಿಸರವಾದಿಗಳ ತೀವ್ರ ವಿರೋಧದಿಂದ ಹಾಗೂ ಗುತ್ತಿಗೆ ಪಡೆದ ಕಂಪನಿಗಳಿಂದ ೬೫ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪ ಕೇಳಿಬಂದಿತ್ತು ನಂತರ ಅಲ್ಲಿನ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು.

ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಗೂ ಜನರ ವಿರೋಧ

ಮೆಜೆಸ್ಟಿಕ್ ನಿಂದ -ವಿಂಡ್ಸರ್ ಮ್ಯಾನರ್, ರೇಸ್ ಕೋರ್ಸ್ ರಸ್ತೆಯಿಂದ ಕುಮಾರಕೃಪಾ ದವರೆಗೆ ಭಾರೀ ಪ್ರಮಾಣದಲ್ಲಿ ವಾಹನ ಸಂಚಾರದ ದಟ್ಟಣೆ ಇರುವುದರಿಂದ ಇದನ್ನು ನಿಯಂತ್ರಿಸಲು ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲಾಗುತ್ತಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಗ್ನಲ್ ದಾಟಿ ರೈಲ್ವೇ ಸೇತುವೆವರೆಗೆ ಸುಮಾರು 310 ಮೀಟರ್ ಉದ್ದದ ಉಕ್ಕಿನ ಸೇತುವೆ ನಿರ್ಮಿಸಲಾಗುತ್ತದೆ.

ನಾಲ್ಕು ಪಥಗಳನ್ನು ಒಳಗೊಂಡಿದ್ದು ಸುಮಾರು 16 ಮೀಟರ್ ಅಗಲವಾಗಿರುತ್ತದೆ. ಆದರೆ ಮೂಲ ಪ್ರಸ್ತಾವನೆಗಿಂತ ಶೇ.35.96 ರಷ್ಟು ಹೆಚ್ಚುವರಿ ಗುತ್ತಿಗೆ ನೀಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BBMP has finally decided to construct steel bridge in Shivananda circle despte much opposition by the general public.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ