ಆಗಸ್ಟ್ 18ರಂದು ಬಿಜೆಪಿಯಿಂದ ವಿಧಾನಸೌಧ ಚಲೋ

Subscribe to Oneindia Kannada

ಬೆಂಗಳೂರು, ಆಗಸ್ಟ್ 17: ಶುಕ್ರವಾರ ಅಂದರೆ ಆಗಸ್ಟ್ 18ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ 'ವಿಧಾನಸೌಧ ಚಲೋ' ಕಾರ್ಯಕ್ರಮವನ್ನು ಆಯೋಜಿಸಿದೆ.

ಡಿಕೆಶಿ, ಜಾರಕಿಹೊಳಿ ರಾಜೀನಾಮೆಗಾಗಿ ಶುಕ್ರವಾರದಿಂದ ಬಿಜೆಪಿ ಹೋರಾಟ

ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಿಂದ ಭಾರೀ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಆರ್.ಅಶೋಕ್ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.

FIR filed on Catholic priest Fr Victor D'mello for forging will of church member

ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ಎಸ್. ಮುನಿರಾಜು, ಬೆಂಗಳೂರು ಮಹಾನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು, ಬೆಂಗಳೂರು ನಗರ ಮತ್ತು ನಗರ ಜಿಲ್ಲೆ ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕಳೆದ ವಾರ ಬೆಂಗಳೂರಿಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವರ ರಾಜೀನಾಮೆಗೆ ಒಂದು ವಾರಗಳ ಕಾಲ ಪ್ರತಿಭಟನೆ ನಡೆಸುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದರು. ಇದೀಗ ಅದರಂತೆ ಪ್ರತಿಭಟನೆಗೆ ಇಳಿದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
On August 18, the BJP organised a 'Vidhana Soudha Chalo' protest demanding the resignation of corrupt ministers from the state Congress government. The protest will begin at 11am at Freedom Park. State BJP President BS Yeddyurappa and deputy opposition R Ashok will lead the protest.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ