ಬೆಂಗಳೂರು : ಮಾರತ್ ಹಳ್ಳಿ ಪಿಜ್ಜಾ ಹಟ್‌ನಲ್ಲಿ ಬೆಂಕಿ ಆಕಸ್ಮಿಕ

Posted By:
Subscribe to Oneindia Kannada

ಬೆಂಗಳೂರು, ಮೇ 06 : ಬೆಂಗಳೂರಿನ ಮಾರತ್ ಹಳ್ಳಿಯ ಡೋಮಿನೋಸ್ ಪಿಜ್ಜಾ ಹಟ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಅಗ್ನಿ ಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಶುಕ್ರವಾರ ಮಧ್ಯಾಹ್ನ ಪಿಜ್ಜಾ ಹಟ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೊದಲು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಕಟ್ಟಡದ ನೆಲ ಮಹಡಿಯಲ್ಲಿದ್ದ 20ಕ್ಕೂ ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಬಗ್ಗೆ ತಿಳಿದ ತಕ್ಷಣ ಕಟ್ಟದಲ್ಲಿದ್ದವರು ಹೊರಗೋಡಿ ಬಂದಿದ್ದಾರೆ.[ಬೆಂಗಳೂರು: ಗೋಪಾಲನ್ ಆರ್ಕೆಡ್ ನಲ್ಲಿ ಅಗ್ನಿ ಅವಘಡ]

pizza hut

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ 4 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು. ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗ್ನಿ ಆಕಸ್ಮಿಕದಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.[ಹುಬ್ಬಳ್ಳಿಯಲ್ಲಿ ತಪ್ಪಿದ ಭಾರೀ ಬೆಂಕಿ ಅನಾಹುತ]

fire

ಮೊದಲು ನೆಲ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಮೊದಲನೇ ಮಹಡಿಗೆ ಹಬ್ಬಿತು. ಇದರಿಂದಾಗಿ ಕಟ್ಟಡದ ತುಂಬಾ ದಟ್ಟ ಹೊಗೆ ಆವರಿಸಿತು. ಅಗ್ನಿ ಶಾಮಕದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. ಅಗ್ನಿ ಆಕಸ್ಮಿಕದಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

fire accident

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Panic gripped at the Marathahalli Domino's pizza hut after a fire broke out on Friday, May 6, 2016.
Please Wait while comments are loading...