ಸಿನಿಮೀಯ ರೀತಿಯಲ್ಲಿ ಗುಂಡಿನ ದಾಳಿ: ಮಹಿಳೆ ಪಾರು

Posted By: Nayana
Subscribe to Oneindia Kannada

ಬೆಂಗಳೂರು, ಮಾರ್ಚ್ 10: ನಗರದಲ್ಲಿ ಮತ್ತೊಮ್ಮೆ ಗುಂಡಿನ ಮೊರೆತ ಕೇಳಿಸಿದೆ, ಸಿನಿಮಾ ಸ್ಟೈಲ್ ನಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ.

ವಿದ್ಯಾರಣ್ಯಪುರದ ಹನುಮಾನ್ ಲೇಔಟ್ ನಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡಡೆದಿದೆ. ಸ್ಪ್ಲೆಂಡರ್ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಿಂಧು ಎಂಬುವವರ ಮೇಲೆ ಎರಡು ಸುತ್ತು ಫೈರ್ ಮಾಡಿ, ಎಸ್ಕೇಪ್ ಆಗಿದ್ದಾರೆ. ಈ ಘಟನೆಯಲ್ಲಿ ಸಿಂಧು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಧು ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಧು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಹನುಮಾನ್ ಲೇಔಟ್ ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ ಕೆಲಸದ ಬಳಿಕ ಹನುಮಾನ್ ಲೇಔಟ್ ನ 1 ನೇ ಅಡ್ಡರಸ್ತೆಯಲ್ಲಿರುವ ಅಕ್ಕನ ಮನೆಯಲ್ಲಿದ್ದ ಇಬ್ಬರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಲು ಸ್ಕೂಟಿಯಲ್ಲಿ ಬಂದಿದ್ದರು.

Firing on woman in Bengaluru

ಈ ವೇಳೆ ಒಂಟಿಯಾಗಿ ಹೋಗುತ್ತಿದ್ದ ಸಿಂಧು ಮೇಲೆ ಇಬ್ಬರು ಆಗಂತುಕರು ದಾಳಿ ಮಾಡಿ, ಅವರ ಬಳಿ ಇದ್ದ ವ್ಯಾನಿಟಿ ಬ್ಯಾಗ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಆಗ ಸಿಂಧು ಅದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಸುಲಿಗೆಕೋರ ತನ್ನ ಬಳಿ ಇದ್ದ ಗನ್ ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಸಿಂಧು ಕಿರುಚಾಡಿಕೊಂಡಿದ್ದರಿಂದ ಗಾಬರಿಗೊಂಡ ಆರೋಪಿಗಳಿಬ್ಬರು ಎಸ್ಕೇಪ್ ಆಗಿದ್ದಾರೆ ಎಂದು ಈಶಾನ್ಯ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In a cinematic style two miscreants have fired with gun on a women, identified as Sindhu while she was going on a scooter at Hanuman layout in Vidyaranyapura. Miscreants were tried to snatch her vanity bag and she was opposed an cried. Later they fired on her, police said.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ