ದಟ್ಟ ಮಂಜು : ಕೆಐಎನಲ್ಲಿ 104 ವಿಮಾನ ಹಾರಾಟದಲ್ಲಿ ವ್ಯತ್ಯಯ

Posted By: Gururaj
Subscribe to Oneindia Kannada

ಬೆಂಗಳೂರು, ಜನವರಿ 14 : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಭಾನುವಾರ ಮುಂಜಾನೆ ದೇವನಹಳ್ಳಿಯಲ್ಲಿ ಅಪಾರ ಪ್ರಮಾಣದಲ್ಲಿ ಮಂಜು ಕವಿದಿದೆ. ಇದರಿಂದಾಗಿ ಮುಂಜಾನೆ 4 ಗಂಟೆಯಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ರನ್‌ ವೇ ಮೇಲೆ ದಟ್ಟ ಮಂಜು ಆವರಿಸಿದೆ.

104ಕ್ಕೂ ಹೆಚ್ಚು ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ವಿಮಾನ ನಿಲ್ದಾಣ ಜನರಿಂದ ತುಂಬಿ ಹೋಗಿದೆ.

ಸೇಲಂ, ಮಡಿಕೇರಿಗೆ ಕೆಎಸ್ಆರ್‌ಟಿಸಿ ಫ್ಲೈ ಬಸ್ ಸೇವೆ ಆರಂಭ

Airport

ಬೆಳಗ್ಗೆ 8.30ರ ಬಳಿಕ ದಟ್ಟ ಮಂಜು ಕಡಿಮೆಯಾಗಿದ್ದು ವಿಮಾನಗಳ ಹಾರಾಟ ಆರಂಭವಾಗಿದೆ. ವಿಮಾನಗಳ ವೇಳಾಪಟ್ಟಿ ಬದಲಾವಣೆ ಆಗಿರುವುದರಿಂದಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಏರ್ ಪೋರ್ಟ್ ಟ್ಯಾಕ್ಸಿ ಆನ್ ಲೈನ್ ನೋಂದಣಿ ಮಾಡದಿದ್ದರೆ ಸೇವೆ ರದ್ದು

ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿಯೂ ಮಂಜಿನ ಕಾರಣದಿಂದಾಗಿ ಎರಡು ದಿನ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. ವಿಮಾನ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿಯೂ ದಟ್ಟ ಮಂಜು ಕವಿದಿದ್ದರಿಂದ ಸಂಚಾರ ನಿಧಾನಗತಿಯಲ್ಲಿ ಸಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bad weather disrupted services of 104 flights at the Kempegowda International Airport (KIA) Devanahalli, Bengaluru on Sunday, January 14, 2018 morning from 4 am.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ