ಸಚಿವ ರಮಾನಾಥ ರೈ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್. 16: ಅರಣ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ್‌ ರೈ ಅವರು ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಗುರುವಾರ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ರಕ್ತದೊತ್ತಡ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

Forest Minister Ramanath Rai hospitalized

ರಮಾನಾಥ ರೈ ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ. ರಕ್ತದೊತ್ತಡದಿಂದಾಗಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ತಪಾಸಣೆಮಾಡಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಯು.ಟಿ. ಖಾದರ್ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ರೈ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಪ್ರತಿಕ್ರಿಯಿಸಿರುವ ಖಾದರ್, ರಮಾನಾಥ ರೈ ಆರೋಗ್ಯಯುತರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Forest Minister Ramanath Rai was admitted to Bengaluru M S Ramayya hospital on March 16, after he complained of severe chest congestion.
Please Wait while comments are loading...