ಸರ್ಕಾರಿ ಸೌಲಭ್ಯಕ್ಕೆ ಗೆಜೆಟೆಡ್, ನೋಟರಿ ಸಹಿ ಬೇಕಿಲ್ಲ
ನವದೆಹಲಿ, ಜು.16: ಇನ್ನು ಮುಂದೆ ಸರ್ಕಾರಿ ಸೌಲಭ್ಯ ಪಡೆಯಲು ದಾಖಲೆಗಳಿಗೆ ಗೆಜೆಟೆಡ್ ಅಧಿಕಾರಿ ಅಥವಾ ನೋಟರಿಯವರ ಸಹಿ ಅಗತ್ಯವಿಲ್ಲ. ದಾಖಲೆ ಮೇಲೆ ನಾಗರಿಕರ ಸ್ವಯಂ ದೃಢೀಕೃತ ಸಹಿ ಇದ್ದಲ್ಲಿ ಸರ್ಕಾರಿ ಸೌಲಭ್ಯ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ.
ಇಲ್ಲಿಯವರೆಗೆ ಸರ್ಕಾರಿ ಸೌಲಭ್ಯ ಪಡೆಯಲು ಜನರು ತಮ್ಮ ದಾಖಲೆಗಳಿಗೆ ಸಹಿ ಹಾಕಲು ನೋಟರಿ ಮತ್ತು ಗೆಜೆಟೆಡ್ ಅಧಿಕಾರಿಗಳಿಗೆ 100, 500 ರೂ ನೀಡುತ್ತಿದ್ದರು.
ಕೇಂದ್ರ ಸರ್ಕಾರ ಹೊಸ ಕ್ರಮದಿಂದಾಗಿ ಜನರ ಹಣ ಉಳಿತಾಯವಾಗಲಿದೆ. ಜೊತೆಗೆ ಅಧಿಕಾರಿಯ ಹುಡುಕಾಟ ಮತ್ತು ಅಧಿಕಾರಿ ಸೂಚಿಸಿದ ಪೂರಕ ದಾಖಲೆಗಳನ್ನು ಹೊಂದಿಸುವುದರಲ್ಲೇ ಕಳೆದುಹೋಗುತ್ತಿದ್ದ ಸಮಯವೂ ಉಳಿಯಲಿದೆ.

ಸ್ವಯಂ ದೃಢೀಕರಣ ವ್ಯವಸ್ಥೆಯನ್ನು ಜಾರಿಗೆ ತರುವಂತೆ ಎರಡನೇ ಆಡಳಿತ ಸುಧಾರಣಾ ಆಯೋಗ ತನ್ನ 12ನೇ ವರದಿಯಲ್ಲಿ ಶಿಫಾರಸು ಮಾಡಿತ್ತು. ಈ ಶಿಫಾರಸಿನ ಆಧಾರದಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.[ನೋಟರಿಗಳು ವಿವಾಹ ಪ್ರಮಾಣ ಪತ್ರ ನೀಡುವಂತಿಲ್ಲ]
ಹೊಸ ನಿಯಮವನ್ನು ಜಾರಿಗೆ ತರುವಂತೆ ಕೇಂದ್ರ ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ದೂರುಗಳ ಇಲಾಖೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ ಎಂದು ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications