ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಬಿಜೆಪಿಗೆ ಸೇರ್ಪಡೆ

|
Google Oneindia Kannada News

Recommended Video

ಕಮಲ ಪಾಳಯಕ್ಕೆ ಗೂಳಿಹಟ್ಟಿ ಶೇಖರ್ ಸೇರ್ಪಡೆ | Oneindia Kannada

ಬೆಂಗಳೂರು, ಫೆಬ್ರವರಿ 3 : ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಶನಿವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು. ಇದಕ್ಕೂ ಮುನ್ನ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಪ್ರಕಟವಾಗಿತ್ತು. ಅದು ಕೂಡ ಈ ವರದಿಯಲ್ಲಿದೆ.

ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿ, ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್ ಶನಿವಾರ ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸಮ್ಮುಖದಲ್ಲಿ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆ ಆಗಲಿದ್ದಾರೆ.

ಬಿಜೆಪಿಗೆ ಮರಳಿದ ಹಾಲಾಡಿ ಶ್ರೀನಿವಾಸ ಶೆಟ್ಟಿ!ಬಿಜೆಪಿಗೆ ಮರಳಿದ ಹಾಲಾಡಿ ಶ್ರೀನಿವಾಸ ಶೆಟ್ಟಿ!

ಈ ಹಿಂದೆ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದ ಶೇಖರ್, ಇದೀಗ ಬಿಜೆಪಿಗೆ ಸೇರ್ಪಡೆ ಆಗುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಬಿಜೆಪಿ ಅಧಿಕಾರಾವಧಿಯಲ್ಲಿ ಅವಿಶ್ವಾಸ ಗೊತ್ತುವಳಿ ಸಂದರ್ಭದಲ್ಲಿ ಅಂಗಿ ಹರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದ ಗೂಳಿಹಟ್ಟಿ ಶೇಖರ್ ಭಾರೀ ಸುದ್ದಿ ಮಾಡಿದ್ದರು.

Former minister Goolihatti Shekhar will join BJP

ಮಾಜಿ ಸಚಿವ ಹಾಗೂ ಕೆಲ ಕಾಲ ಬಿಜೆಪಿಗೆ ಬೆಂಬಲ ನೀಡಿದ್ದ ಗೂಳಿಹಟ್ಟಿ ಶೇಖರ್ ಈಗ ಅಂದರೆ ಶನಿವಾರ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ತಿಂಗಳ ಕಾಲ ಅಷ್ಟೇ ಸಮಯವಿದ್ದು, ಟಿಕೆಟ್ ಗಾಗಿ ಬಿಜೆಪಿಗೆ ಹಾರಿದ್ದರೂ ಅಚ್ಚರಿಯಿಲ್ಲ. ಇನ್ನು ಬಿಜೆಪಿಯ ಆನಂದ್ ಸಿಂಗ್ ಈಚೆಗಷ್ಟೇ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

English summary
Former minister Goolihatti Shekhar will join BJP in Bengaluru on February 3rd, Saturday. Previously Shekhar supported Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X