ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಭೇಟಿ ಬಳಿಕ ರಾಜಕೀಯ ಚರ್ಚೆಯೇ ನಡೆದಿಲ್ಲ: ಎಂಬಿ ಪಾಟೀಲ್

By Nayana
|
Google Oneindia Kannada News

ಬೆಂಗಳೂರು, ಜೂನ್‌ 30: ಮಾಜಿ ಸಚಿವ ಎಂ.ಬಿ ಪಾಟೀಲ್‌ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿದರು.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಧರ್ಮಸ್ಥಳ ನಿಸರ್ಗ ಚಿಕಿತ್ಸಾ ಕೇಂದ್ರಕ್ಕೆ ದಾಖಲಾದಾಗ ಅವರನ್ನು ಭೇಟಿ ಮಾಡಲು ಆಗಿರಲಿಲ್ಲ. ಹೀಗಾಘಿ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಲು ಬಂದಿದ್ದೆ. ಭೇಟಿ ವೇಳೆ ಯಾವುದೇ ರಾಜಕೀಯ ವಿಷಯವನ್ನು ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಬಜೆಟ್‌ಗೂ ಮುನ್ನಾ ಸಂಪುಟ ವಿಸ್ತರಣೆ, ಎಂಬಿ ಪಾಟೀಲ್‌ಗೆ ಸಚಿವ ಸ್ಥಾನ ಸಾಧ್ಯತೆಬಜೆಟ್‌ಗೂ ಮುನ್ನಾ ಸಂಪುಟ ವಿಸ್ತರಣೆ, ಎಂಬಿ ಪಾಟೀಲ್‌ಗೆ ಸಚಿವ ಸ್ಥಾನ ಸಾಧ್ಯತೆ

ಸಂಪುಟ್ ವಿಸ್ತರಣೆ ವಿಳಂಬ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ವಿಚಾರ ಕುರಿತಂತೆ ಮಾಧ್ಯಮಗಳು ಪ್ರಶ್ನಿಸಿದಾಗ ಯಾವುದೇ ವಿಚಾರಗಳ ಬಹಿರಂಗ ಹೇಳಿಕೆಯನ್ನು ನೀಡುವುದಿಲ್ಲ ಎಂದು ಜಾರಿಕೊಂಡರು. ಇತ್ತೀಚೆಗಷ್ಟೇ ಕಾಂಗ್ರೆಸ್‌ ಹೈಕಮಾಂಡ್‌ ಸಂಪುಟ ವಿಸ್ತರಣೆ ಹಾಗೂ ಸರ್ಕಾರದ ಆಂತರಿಕ ವಿಚಾರಗಳ ಕುರಿತು ಮಾತನಾಡದಂತೆ ಪಕ್ಷದ ಸದಸ್ಯರಿಗೆ ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

former minister MB Patil met siddaramaiah

ಅತೃಪ್ತ ಶಾಸಕರು ಬಂಡಾಯ ಎದ್ದಾಗಿನಿಂದಲೂ ಅವರನ್ನು ಸಮಾಧಾನ ಪಡಿಸಲು ಸಿದ್ದರಾಮಯ್ಯ ಮುಂದಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕುತೂಹಲ ಮೂಡಿಸಿದೆ. ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರರೊಂದಿಗೆ ಒಂದೂವರೆಗಂಟೆಗಳ ಕಾಲ ಮಾತುಕತೆ ನಡೆಸಿದ ಅವರು 2ನೇ ಹಂತದ ಸಂಪುಟ ವಿಸ್ತರಣೆ ವೇಳೆ ಪರಿಗಣಿಸಬೇಕು. ಹಾಗೂ ತನ್ನ ಜೊತೆಯಲ್ಲಿ ಇರುವ ಶಾಸಕರಿಗೂ ಸಂಪುಟದಲ್ಲಿ ಸ್ಥಾನ ಕೊಡಿ, ಕೆಲವರಿಗೆ ನಿಗಮ ಮಂಡಳಿ ಸ್ಥಾನ ಕೊಡಬೇಕು‌ ಎಂದು ಒತ್ತಡ ಹಾಕಿದ್ದಾರೆ ಎನ್ನುವ ಸುದ್ದಿಗಳು ಕೇಳಿಬಂದಿದೆ.

English summary
Fomer minister MB Patil has met former chief minister Siddaramaiah on Saturday at cauvery residence. After meeting he clarified that there was no political issues discuss during the meet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X