ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಿಂದ ಅಂಬರೀಶ್, ಬಸವನಗುಡಿಯಿಂದ ರಮ್ಯಾ ಸ್ಪರ್ಧೆ?

|
Google Oneindia Kannada News

Recommended Video

ಮಂಡ್ಯದಿಂದ ಅಂಬರೀಶ್, ಬಸವನಗುಡಿಯಿಂದ ರಮ್ಯಾ ಸ್ಪರ್ಧೆ? | Oneindia Kannada

ಬೆಂಗಳೂರು, ನವೆಂಬರ್ 30 : 'ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ರಮ್ಯಾ, ಸೌಮ್ಯ, ಸುಮಾ ಯಾರೇ ಬಂದರೂ ಓಕೆ. ಪಕ್ಷ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ'. ಮಾಜಿ ಸಚಿವ, ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಎರಡು ದಿನಗಳ ಹಿಂದೆ ಹೇಳಿದ ಮಾತಿದು.

ಮಂಡ್ಯದ ಮಾಜಿ ಸಂಸದೆ, ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಮಂಡ್ಯದ ಯಾವುದಾದರೂ ಕ್ಷೇತ್ರದಿಂದ ಅವರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದವು.

ರಮ್ಯಾ ಮುಂದಿನ ರಾಜಕೀಯ ನಡೆ : ಯಾರು, ಏನು ಹೇಳಿದರು?ರಮ್ಯಾ ಮುಂದಿನ ರಾಜಕೀಯ ನಡೆ : ಯಾರು, ಏನು ಹೇಳಿದರು?

ರಮ್ಯಾ ಅವರು ಬೆಂಗಳೂರಿನ ಬಸವನಗುಡಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ. ಆದರೆ, ರಮ್ಯಾ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುವ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಮಂಡ್ಯ ರಾಜಕಾರಣ : ವಿಧಾನಸಭೆ ಚುನಾವಣೆ ಬಗ್ಗೆ ರಮ್ಯಾ ಸ್ಪಷ್ಟನೆಮಂಡ್ಯ ರಾಜಕಾರಣ : ವಿಧಾನಸಭೆ ಚುನಾವಣೆ ಬಗ್ಗೆ ರಮ್ಯಾ ಸ್ಪಷ್ಟನೆ

'ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರಲು ಹೈಕಮಾಂಡ್ ಒಪ್ಪಿಗೆ ಪಡೆಯಬೇಕು. ರಮ್ಯಾ ಅವರಿಗೆ ಟಿಕೆಟ್ ನೀಡಿದರೆ ಅವರ ಪರವಾಗಿ ಪ್ರಚಾರ ಮಾಡುತ್ತೇನೆ' ಎಂದು ಅಂಬರೀಶ್ ಹೇಳಿದ್ದಾರೆ. ರಮ್ಯಾ ಅವರು ಬಸವನಗುಡಿಯಿಂದ ಸ್ಪರ್ಧಿಸಲಿದ್ದಾರೆಯೇ? ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ...

ಸಲ್ಲದ ಗಾಳಿ ಸುದ್ದಿಗಳಿಗೆ ಸೂಜಿ ಚುಚ್ಚಿದ ಅಂಬರೀಶ್ಸಲ್ಲದ ಗಾಳಿ ಸುದ್ದಿಗಳಿಗೆ ಸೂಜಿ ಚುಚ್ಚಿದ ಅಂಬರೀಶ್

ಡಿಕೆ ಶಿವಕುಮಾರ್ ಹೇಳಿದ್ದೇನು?

ಡಿಕೆ ಶಿವಕುಮಾರ್ ಹೇಳಿದ್ದೇನು?

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು, 'ರಮ್ಯಾ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ಮಂಡ್ಯ ಅಥವ ಬಸವನಗುಡಿಯಿಂದ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಅವರು ನಮ್ಮ ಪಕ್ಷದ ಸ್ಟಾರ್ ಕ್ಯಾಂಪೈನರ್' ಎಂದು ಹೇಳಿದ್ದಾರೆ.

'ರಮ್ಯಾ ಟಿಕೆಟ್ ಕೇಳಿಲ್ಲ'

'ರಮ್ಯಾ ಟಿಕೆಟ್ ಕೇಳಿಲ್ಲ'

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು, 'ರಮ್ಯಾ ಅವರು ಮಂಡ್ಯದಿಂದ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ. ಮಂಡ್ಯದ ಕಾರ್ಯರ್ತರು, ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ' ಎಂದು ಹೇಳಿದ್ದಾರೆ.

ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರ

ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ರಮ್ಯಾ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಮುಕ್ತ ಮನಸ್ಸು ಹೊಂದಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಅವರನ್ನು ಚುನಾವಣೆ ಕಣಕ್ಕಿಳಿಸಲು ಅವರು ಇಚ್ಛಿಸಿದ್ದಾರೆ ಎಂದು ತಿಳಿದುಬಂದಿದೆ.

ಅಂಬರೀಶ್ ಹೇಳುವುದೇನು?

ಅಂಬರೀಶ್ ಹೇಳುವುದೇನು?

'ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ರಮ್ಯಾ, ಸೌಮ್ಯ, ಸುಮಾ ಯಾರೇ ಬಂದರೂ ಓಕೆ. ಪಕ್ಷ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ. ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರಲು ಹೈಕಮಾಂಡ್ ಒಪ್ಪಿಗೆ ಪಡೆಯಬೇಕು' ಎಂದು ಅಂಬರೀಶ್ ಹೇಳಿದ್ದಾರೆ.

ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ

ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಂಡ್ಯದಲ್ಲಿ ಅಂಬರೀಶ್ ಸ್ಪರ್ಧೆ ಬಗ್ಗೆ ಹೇಳಿಕೆ ನೀಡಿದ್ದು, 'ಅಂಬರೀಶ್ ಅವರನ್ನು ಮೂಲೆಗುಂಪು ಮಾಡಿಲ್ಲ. ಮಂಡ್ಯದಲ್ಲಿ ಯಾರು ಸ್ಪರ್ಧಿಸಬೇಕು ಎಂದು ಹೈಕಮಾಂಡ್' ನಿರ್ಧಾರ ಕೈಗೊಳ್ಳಲಿದೆ' ಎಂದು ಹೇಳಿದರು.

ರವಿ ಸುಬ್ರಮಣ್ಯ ಶಾಸಕರು

ರವಿ ಸುಬ್ರಮಣ್ಯ ಶಾಸಕರು

ಬೆಂಗಳೂರಿನ ಬಸವನಗುಡಿ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. ಎಲ್‌.ಎ.ರವಿ ಸುಬ್ರಮಣ್ಯ ಅವರು 2008ರ ಚುನಾವಣೆಯಲ್ಲಿ 50,294 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ 43,883 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

English summary
Karnataka Energy Minister D.K Shivakumar said that Ramya would play an active role in state politics, She will contest either from Mandya or Basavanagudi. Will Ramya come back to state politics?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X