• search

ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

By Trupti Hegde
Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಬೆಂಗಳೂರು, ಜುಲೈ 02: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಹಿಂದಿನಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಾರೆ.

    ಕಿಡ್ನಿ ಕಸಿ ಚಿಕಿತ್ಸೆ ನಂತರ ಮನೆಗೆ ಮರಳಿದ ಜೇಟ್ಲಿ

    ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ(1996) ಧನಂಜಯ್ ಕುಮಾರ್ ಅವರು ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದರು.

    Former union minister Dhanjaya Kumars condition is critical: BGS Bengaluru Doctors

    ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿರುವ ಅವರು, ಬಿಜೆಪಿ ತೊರೆದು, ಬಿಎಸ್ ಯಡಿಯೂರಪ್ಪ ಅವರ ಕೆಜೆಪಿ ಪಕ್ಷಕ್ಕೂ ಸೇರಿದ್ದರು.ಧನಂಜಯ್ ಕುಮಾರ್ ಮಾಜಿ ಸಂಸದರೂ ಹೌದು.10ನೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಧನಂಜಯ ಕುಮಾರ್, ಕಾಂಗ್ರೆಸ್ ಧುರೀಣ ಜನಾರ್ದನ ಪೂಜಾರಿ ಅವರನ್ನು ಸೋಲಿಸಿ, ಸಂಸದರಾಗಿದ್ದರು.

    ಬಿಜೆಪಿಯಲ್ಲಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವರೂ ಆಗಿದ್ದ ಅವರು, ಬಿ ಎಸ್ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ನಂತರ ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದರು. ಮತ್ತೆ ಬಿ ಎಸ್ ವೈ ಬಿಜೆಪಿಗೆ ಹಿಂದಿರುಗಿದ ನಂತರ, ಕೆಲವು ವೈಮನಸ್ಯದಿಂದಾಗಿ ಅವರು ಕಾಂಗ್ರೆಸ್ ಸೇರಿದ್ದಾರೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Former union minister Dhanjay Kumar's condition is critical since four days. He is suffering from kidney problem, He is taking treatment in BGS Globa hospital in Kengeri in Bengaluru.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more