ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 7: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪದ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಲ್ವರಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ವೆಂಕಟನರಸಪ್ಪ, ಪತ್ನಿ ತಾಯಮ್ಮ ಮತ್ತು ಮಗಳು ಹೊನ್ನಮ್ಮ ಮೃತಪಟ್ಟಿದ್ದು, ಮತ್ತೋರ್ವ ಮಗ ದೊಡ್ಡೇಗೌಡನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Four family member attempts to suicide three death one condition serious in Bengaluru

ಕೌಟುಂಬಿಕ ಕಲಹದಲ್ಲಿ ತಂದೆ-ತಾಯಿ ಬೆಟ್ಟಹಳ್ಳಿಯ ಮನೆಯಲ್ಲಿ ವಿಷ ಸೇವಿಸಿದ ವಿಚಾರ ತಿಳಿದ ಅಕ್ಕ-ತಮ್ಮ ತಾವರೆಕೆರೆ ಬಳಿ ವಿಷ ಸೇವನೆ ಮಾಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ದೊಡ್ಡೇಗೌಡರಿಗೆ ವಿವಾಹವಾಗಿದ್ದು, ಮನೆಯಲ್ಲಿ ಸಣ್ಣ-ಪುಟ್ಟ ಗಲಾಟೆಗಳು ನಡೆಯುತ್ತಿದ್ದವು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Four members of family, attempts to suicide three deats one condition serious in Bettihalli near Nelamangala, Bengaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ