ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೆನ್ನೈನಿಂದ ಬಂದವರಿಗೆ ಉಚಿತ ತಪಾಸಣೆ, ಚಿಕಿತ್ಸೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 08 : ಚೆನ್ನೈನಲ್ಲಿನ ಭೀಕರ ಪ್ರವಾಹಕ್ಕೆ ಸಿಲುಕಿದವರಿಗೆ ನೆರವು ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಚೆನ್ನೈನಿಂದ ಬೆಂಗಳೂರಿಗೆ ಬರುವವರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಕಲ್ಪಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು 'ಚೆನ್ನೈನಲ್ಲಿ ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ' ಎಂದು ಹೇಳಿದರು. [ಚೆನ್ನೈ ಪ್ರವಾಹದ ಚಿತ್ರಗಳನ್ನು ನೋಡಿ]

ut khader

'ಚೆನ್ನೈನಿಂದ ಬೆಂಗಳೂರಿಗೆ ಬರುವವರಿಗೆ ವಿಕ್ಟೋರಿಯಾ, ಬೌರಿಂಗ್‌, ಕೆ.ಸಿ.ಜನರಲ್‌, ಜಯನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ' ಎಂದರು. [ಚೆನ್ನೈ ಸಂತ್ರಸ್ತರಿಗೆ ಬದುಕು ಕಟ್ಟಿಕೊಡಲು ನೀವು ಕೈಜೋಡಿಸಿ]

'ಕಲಾಸಿಪಾಳ್ಯ ಮತ್ತು ಶಾಂತಿನಗರ ಬಸ್‌ ನಿಲ್ದಾಣ, ಸಿಟಿ ರೈಲು ನಿಲ್ದಾಣ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣಗಳಲ್ಲಿ ಚೆನ್ನೈ ಸಂತ್ರಸ್ತರ ಆರೋಗ್ಯ ಸಹಾಯವಾಣಿ ಕೇಂದ್ರ (18004250235) ತೆರೆಯಲಾಗಿದ್ದು ಸಲಹೆ ಮತ್ತು ಮಾರ್ಗದರ್ಶನ ನೀಡಲು ನಿರ್ಧರಿಸಲಾಗಿದೆ' ಎಂದು ಸಚಿವರು ವಿವರಣೆ ನೀಡಿದರು. [ಚೆನ್ನೈ ಜಲ ಪ್ರಳಯ ಮಾನವ ನಿರ್ಮಿತ, ಬೆಂಗಳೂರಿಗೆ ಎಚ್ಚರಿಕೆ!]

ಸಹಕಾರ ನೀಡಲು ಸಿದ್ಧ : 'ಚೆನ್ನೈನಲ್ಲಿ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಿದ್ಧವಿದೆ. ರಾಜ್ಯ ಸರ್ಕಾರ ಈಗಾಗಲೇ 5 ಕೋಟಿ ರೂ. ನೀಡಿದೆ. ತಮಿಳುನಾಡು ಹೆಚ್ಚಿನ ನೆರವು ಕೇಳಿದರೆ ನೀಡಲು ಸಿದ್ಧ' ಎಂದು ಸಚಿವರು ಹೇಳಿದರು.

English summary
Health Minister U.T.Khader said, Karnataka health department will provide free medical checkup facility to all the flood-affected people returning from Chennai to Bengaluru. Arrangements will be made for health checkups at Bowring Hospital, KC General Hospital, Victoria Hospital and Jayanagar Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X