ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಆಗ್ರಹ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 31: ಸನಾತನ ಸಂಘಟನೆಯನ್ನು ಭಯೋತ್ಪಾದನಾ ಸಂಘಟನೆ ಎಂದು ಘೋಷಿಸುವುದು ಹಾಗೂ ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ ವಿರುದ್ಧ ದಾಖಲಾಗಿರುವ ಪ್ರಕರಣ ಹಿಂಪಡೆಯುವಂತೆ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ನೇತೃತ್ವದ ಗೌರಿ ಲಂಕೇಶ್ ಟ್ರಸ್ಟ್ ಸದಸ್ಯರು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಗೌರಿ ಹಾಗೂ ಎಂಎಂ ಕಲ್ಬುರ್ಗಿ ಹತ್ಯೆಯಲ್ಲಿ ಒಂದೇ ಸಂಘಟನೆ ಕೈವಾಡವಿದೆ. ಎಸ್‌ಐಟಿ ತನಿಖೆಯಲ್ಲಿಯೂ ಇದು ಸಾಬೀತಾಗಿದೆ, ತಕ್ಷಣ ಸರ್ಕಾರ ಈ ಸಂಘಟನೆಯನ್ನು ನಿಷೇಧಿಸುವಂತೆ, ಸನಾತನ ಸಂಸ್ಥೆಯನ್ನು ಉಗ್ರ ಸಂಘಟನೆ ಎಂದು ಘೋಷಣೆ ಮಾಡಬೇಕು, ಮತೀಯ ಸಂಘಟನೆ, ಸಂಸ್ಥೆಗಳ ಆರ್ಥಿಕ ವ್ಯವಹಾರ, ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಗೌರಿ ಹತ್ಯೆಗೆ ವರ್ಷ, ಕಲ್ಬುರ್ಗಿ ಕೊಲೆಗೆ ಮೂರು ವರ್ಷ: ಮುಂದೇನು?ಗೌರಿ ಹತ್ಯೆಗೆ ವರ್ಷ, ಕಲ್ಬುರ್ಗಿ ಕೊಲೆಗೆ ಮೂರು ವರ್ಷ: ಮುಂದೇನು?

ಸೆಪ್ಟೆಂಬರ್ 5ಕ್ಕೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಒಂದು ವರ್ಷ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಅಂದು ರಾಜಭವನ ಚಲೋ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

Freedom fighter Doreswamy urged govt to declare Sanatana samstha as terrorist organization

ಗೌರಿ ಲಂಕೇಶ್ ಹತ್ಯೆ: ಪುಣೆಯಲ್ಲಿ ಮತ್ತೊಂದು ಬೈಕ್ ಪತ್ತೆಗೌರಿ ಲಂಕೇಶ್ ಹತ್ಯೆ: ಪುಣೆಯಲ್ಲಿ ಮತ್ತೊಂದು ಬೈಕ್ ಪತ್ತೆ

ಸವಾಮೇಶಕ್ಕೆ ಸ್ವಾಮಿ ಅಗ್ನಿವೇಶ್, ಸರ್ದಾರ್ ಅಹಮದ್ ಖುರೇಷಿ, ತನ್ವೀರ್ ಅಹಮದ್ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌ಎಸ್ ದೊರೆಸ್ವಾಮಿ ತಿಳಿಸಿದರು.ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಮತ್ತು ರಕ್ಷಣೆ ನೀಡುವಂತೆ ಪರಮೇಶ್ವರ ಅವರಿಗೆ ಮನವಿ ಮಾಡಿದರು.

English summary
Freedom fighter H.S. Doreswamy has mwt deputy chief minister Dr.G. Parameshwara and urged govt to declare Sanatana samstha as terrorist organization and withdraw the cases against actor Prakash Rai and activist Jignesh Mewani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X