ಜಾರ್ಜ್ ರಾಜೀನಾಮೆಗೆ ಬಿಜೆಪಿ ಮಹಿಳಾ ಮಣಿಗಳ ಆಗ್ರಹ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್, 11 : ಮಾಜಿ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿರುವ ಹಿನ್ನಲ್ಲೆಯಲ್ಲಿ ಅಂದಿನ ಗೃಹ ಸಚಿವ ಹಾಗೂ ಹಾಲಿ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜಿನಾಮೆಗೆ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿತು.

ಜಾರ್ಜ್ ರಾಜೀನಾಮೆಗಾಗಿ ಬಿಜೆಪಿ ರಾಜ್ಯಾದ್ಯಂತ ಧರಣಿ

ಕೆ.ಜೆ. ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೆಂಗಳೂರು ಮಹಾನಗರ ಮತ್ತು ನಗರ ಜಿಲ್ಲಾ ಮಹಿಳಾ ಮೋರ್ಚಾ ಸೋಮವಾರ ಮೌರ್ಯ ಹೋಟೆಲ್ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

Ganapathi suicide, BJP women's Morcha protest in Bengaluru against KJ George demanding resignation

ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದಾ ನಾಯಕ್ ಸೇರಿದಂತೆ ಹಲವು ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಡಿಕೇರಿಯ ಡಿವೈಎಸ್ಪಿಯಾಗಿದ್ದ ಗಣಪತಿ ಅವರು ಅಂದಿನ ಗೃಹ ಸಚಿವರಾಗಿದ್ದ ಕೆ.ಜೆ ಜಾರ್ಜ್ ಅವರ ಹೆಸರು ಸೇರಿದಂತೆ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ಟಿ.ವಿ ಸಂದರ್ಶನದಲ್ಲಿ ಹೇಳಿ ಬಳಿಕ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Ganapathi suicide, BJP women's Morcha protest in Bengaluru against KJ George demanding resignation

ಹತ್ಯೆಹತ್ಯೆ ಬಗ್ಗೆ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಆದರೆ, ಸಿಐಡಿ ಕ್ಲೀನ್ ಚೀಟ್ ನೀಡಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪೋಷಕರು ಸಿಬಿಐಗೆ ವಹಿಸಬೇಕೆಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಹಲವು ಅನುಮಾಗಳನ್ನು ವ್ಯಕ್ತಪಡಿಸಿ ತನಿಖೆಯನ್ನು ಸಿಬಿಐಗೆ ವಹಿಸಿ ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಇತ್ತೀಚೆಗೆ ಆದೇಶಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP women's wing today staged protest against KJ George demanding his resignation in connection with DySP MK Ganapathi suicide case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ