ಎಸ್ಐಟಿಯಿಂದ ಗೌರಿ ಲಂಕೇಶ್ ಹಂತಕರ ಪತ್ತೆ: ಸಿಎಂ

Posted By: Nayana
Subscribe to Oneindia Kannada

ಬೆಂಗಳೂರು, ನವೆಂಬರ್ 13 : ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹಂತಕರನ್ನು ಪತ್ತೆಹಚ್ಚಲು ವಿಶೇಷ ತನಿಖಾ ದಳವನ್ನು ಈಗಾಗಲೇ ರಚಿಸಲಾಗಿದ್ದು, ಹಂತಕರ ಪತ್ತೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಇಂದು (ನ.13) ತಿಳಿಸಿದರು.

'ಗೌರಿ ಲಂಕೇಶ್ ಹಂತಕರ ಸುಳಿವು ಪತ್ತೆ, ಶೀಘ್ರದಲ್ಲಿಯೇ ಬಂಧನ'

ಸದನದಲ್ಲಿ ಬೆಳಿಗ್ಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನಾ ನಿಲುವಳಿ ಬೆಂಬಲಿಸಿ ಮಾತನಾಡಿದ ಅವರು, ಗೌರಿ ಲಂಕೇಶ್ ಅವರ ಹತ್ಯೆ ನ್ಯಾಯಕ್ಕಾಗಿ ಹೋರಾಟ ಮಾಡಿದವರ ಮೇಲಿನ ಪ್ರಹಾರ. ಹಿರಿಯ ಚಿಂತಕ ಕಲ್ಬುರ್ಗಿ, ಗೌರಿ ಲಂಕೇಶ್ ಹತ್ಯೆಗಳು ಸಮಾಜದಲ್ಲಿ ಭಯದ ವಾತಾವರಣ ಮೂಡಿಸಲು ಸಮಾಜ ಘಾತುಕ ಶಕ್ತಿಗಳು ನಡೆಸಿರುವ ಪ್ರಯತ್ನಗಳಾಗಿವೆ ಎಂದು ಹೇಳಿದರು.

Gauri Lankesh murder case will be solve: CM

ಗೌರಿ ಲಂಕೇಶ್ ಯಾವತ್ತೂ ಅನ್ಯಾಯದೊಂದಿಗೆ ಯಾವ ಕಾರಣಕ್ಕೂ ರಾಜಿಯಾದವರಲ್ಲ. ಸಾಮಾಜಿಕ ಸಮಸ್ಯೆಗಳ ವಿರುದ್ಧ ತಮ್ಮ ಪತ್ರಿಕೆ ಹಾಗೂ ಹೋರಾಟಗಳ ಮೂಲಕ ನಿರಂತರ ಧ್ವನಿ ಎತ್ತಿದವರು. ನಕ್ಸಲೀಯರನ್ನು ಮುಖ್ಯವಾಹಿನಿಗೆ ಕರೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ವೈಯಕ್ತಿಕವಾಗಿಯೂ ಅವರು ನನ್ನೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಹತ್ಯೆಯಾಗುವ ವಾರದ ಮುನ್ನ ನನ್ನ ಮನೆಗೆ ಭೇಟಿ ನೀಡಿ ಹಲವು ವಿಚಾರಗಳ ಕುರಿತು ಚರ್ಚಿಸಿದ್ದರು ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chief Minister Siddaramaiah assured that the State Government formed SIT will promptly try to resolve Journalist Gauri Lankesh murder case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ