ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದು ಯಾರು?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಅಕ್ಟೋಬರ್ 23 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಹತ್ಯೆ ಯಾರು ಮಾಡಿರಬಹುದು? ಎಂಬ ಖಚಿತವಾದ ಸುಳಿವು ಸಿಕ್ಕಿಲ್ಲ. ವೈಯಕ್ತಿಕ ದ್ವೇಷ ಮತ್ತು ಬಲಪಂಥೀಯ ಸಂಘಟನೆಗಳ ಕೈವಾಡವಿರುವ ಬಗ್ಗೆ ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳನ್ನು ಹಿಂಪಡೆದಿಲ್ಲ : ರೆಡ್ಡಿಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳನ್ನು ಹಿಂಪಡೆದಿಲ್ಲ : ರೆಡ್ಡಿ

ನಕ್ಸಲರು ಗೌರಿ ಲಂಕೇಶ್ ಹತ್ಯೆ ಮಾಡಿದ್ದಾರೆ ಎಂಬ ಆಯಾಮದ ಬಗ್ಗೆ ಎಸ್‌ಐಟಿ ತನಿಖೆ ಮುಕ್ತಾಯವಾಗಿದೆ. ತನಿಖೆ ಒಂದು ಹಂತಕ್ಕೆ ತಲುಪುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳ ತಂಡದ ಸದಸ್ಯರು ಸ್ವಸ್ಥಾನಕ್ಕೆ ಮರಳಿದ್ದಾರೆ. ಮೊದಲು 200 ಜನರ ತಂಡದಿಂದ ತನಿಖೆ ಆರಂಭವಾಗಿತ್ತು. ಈಗ 50 ಅಧಿಕಾರಿಗಳ ತಂಡವಿದೆ.

 Gauri Lankesh murder : Probe slows down as leads dry up

ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಎಸ್‌ಐಟಿಗೆ ಹತ್ಯೆ ಯಾರು ಮಾಡಿದ್ದಾರೆ? ಎಂಬ ಖಚಿತ ಸುಳಿವು ಸಿಕ್ಕಿಲ್ಲ. ಕೆಲವು ದಿನಗಳ ಹಿಂದೆ ಎಸ್‌ಐಟಿ ಹಂತಕರ ರೇಖಾಚಿತ್ರವನ್ನು ಬಿಡುಗಡೆ ಮಾಡಿತ್ತು. ಆದರೆ, ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಗೌರಿ ಲಂಕೇಶ್ ಹತ್ಯೆ : ಎಸ್‌ಐಟಿ ಅಧಿಕಾರಿಗಳು ಸ್ವ ಸ್ಥಾನಕ್ಕೆ ವಾಪಸ್!ಗೌರಿ ಲಂಕೇಶ್ ಹತ್ಯೆ : ಎಸ್‌ಐಟಿ ಅಧಿಕಾರಿಗಳು ಸ್ವ ಸ್ಥಾನಕ್ಕೆ ವಾಪಸ್!

ಸೆ.5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದ್ದು, ತಂಡ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದೆ.

English summary
The Special Investigation Team has not yet managed to find any concrete clue in the Gauri Lankesh murder probe. The SIT which was set up to probe the murder is now looking into angles of personal rivalry and possible links to right wing groups. The SIT has almost eliminated the professional and naxalite angles.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X