ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಕ್ಯಾಂಟೀನ್‌ಗಳಲ್ಲಿ ಶೀಘ್ರ ಜನೌಷಧ ಕೇಂದ್ರ ಆರಂಭ

|
Google Oneindia Kannada News

ಬೆಂಗಳೂರು, ಮಾರ್ಚ್ 06: ಅನಾರೋಗ್ಯದಿಂದ ಬಳಲುವವರಿಗೆ ಕಡಿಮೆ ದರದಲ್ಲಿ ಔಷಧಿ ಸಿಗುವಂತೆ ಮಾಡಲು ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯ ಪಾಲಿಕೆ ಆಸ್ಪತ್ರೆಗಳಲ್ಲಿ ಮತ್ತು ಇಂದಿರಾ ಕ್ಯಾಂಟೀನ್‍ಗಳಲ್ಲಿ ಜನೌಷಧ ಕೇಂದ್ರಗಳನ್ನು ತೆರೆಯಲಿದೆ.

ಈಗಾಗಲೇ ಬೆಂಗಳೂರಿನ 198 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವ ಮೂಲಕ, ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡುತ್ತಿರುವ ಮಹಾನಗರ ಪಾಲಿಕೆ ಇನ್ನುಮುಂದೆ ಬಡಜನರ ಅರೋಗ್ಯ ರಕ್ಷಣೆಗಾಗಿ ಇಂದಿರಾ ಕ್ಯಾಂಟೀನ್ ಮತ್ತು ಪಾಲಿಕೆಯ ಆಸ್ಪತ್ರೆಗಳಲ್ಲೂ ಜನರಿಕ್ ಔಷಧ ಕೇಂದ್ರಗಳನ್ನು ತೆರೆಯುವ ಮೂಲಕ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಬಡವರಿಗೆ ಔಷಧ ನೀಡಲು ಬಿಬಿಎಂಪಿ ಮುಂದಾಗಿದೆ.

Generic Pharmacy in BBMP hospitals and Indira canteens now

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಯೋಜನೆ, ಮಹತ್ವ ಪಡೆದಿದ್ದು, ಈಗಾಗಲೇ ಬಿಬಿಎಂಪಿ ಮಂಡಿಸಿದ ಬಜೆಟ್ ನಲ್ಲಿ ಹಲವಾರು ಸಾಮಾಜಿಕ, ಸುರಕ್ಷಿತ ಕಾರ್ಯಕ್ರಮಗಳನ್ನು ಘೋಷಿಸಿದೆ. ಅದರ ಭಾಗವಾಗಿ ಈಗ ಜನರಿಕೆ ಔಷಧ ಮಳಿಗೆಯನ್ನು ಬಿಬಿಎಂಪಿ ತೆರೆಯಲು ಮುಂದಾಗಿದೆ. ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದಿರಾ ಕ್ಯಾಂಟೀನ್ ನಲ್ಲಿ ಅಂದು ಮಹಿಳೆಯರಿಗೆ ಉಚಿತ ಊಟವನ್ನು ವಿತರಿಸಲಾಗುತ್ತಿದೆ.

English summary
BBMP has decided to open Generic pharmacies in all corporation hospitals and Indira canteens in Bengaluru to provide drugs in subsidised rate to the poor
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X