ಶೀಘ್ರದಲ್ಲೇ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 29 : ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಾಗಲಿದೆ. ಮೆಟ್ರೋ ಮೊದಲ ಹಂತದ ಕಾಮಗಾರಿ 2016ರ ನವೆಂಬರ್‌ನಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ನಂತರ ದರವನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಅವರು ಈ ಬಗ್ಗೆ ಮಾತನಾಡಿದ್ದು, 'ನಗರದಲ್ಲಿ ಮೆಟ್ರೋ ಸಂಚಾರ ಆರಂಭವಾದಾಗಿನಿಂದ ದರ ಹೆಚ್ಚಳ ಮಾಡಿಲ್ಲ. ಈಗ ವಿದ್ಯುತ್ ಇತರ ಸೇವೆಗಳು ಮತ್ತು ವಿದ್ಯುತ್ ದರಗಳು ಹೆಚ್ಚಳವಾಗಿವೆ. ಆದ್ದರಿಂದ, ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ' ಎಂದು ಹೇಳಿದ್ದಾರೆ. [ಮಹಿಳೆಯರು, ಹಿರಿಯ ನಾಗರಿಕರ ನೆರವಿಗೆ ನಿಂತ ನಮ್ಮ ಮೆಟ್ರೋ]

Get ready to pay more for Namma Metro

'2016ರ ನವೆಂಬರ್‌ನಲ್ಲಿ ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ನಂತರ ಮೆಟ್ರೋ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗುತ್ತದೆ. ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಲಾಗುತ್ತದೆ. ಆಗ ದರ ಹೆಚ್ಚಳ ಅನಿವಾರ್ಯ' ಎಂದರು. [ನಮ್ಮ ಮೆಟ್ರೋ ದರಪಟ್ಟಿ ನೋಡಿ]

ಸದ್ಯ ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮತ್ತು ಸಂಪಿಗೆ ರಸ್ತೆ-ನಾಗಸಂದ್ರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತಿದೆ. ಬೈಯಪ್ಪನಹಳ್ಳಿ-ಮೈಸೂರು ರಸ್ತೆ ನೇರಳೆ ಮಾರ್ಗದಲ್ಲಿ ಪ್ರತಿನಿತ್ಯ 1.35 ಲಕ್ಷ ಪ್ರಯಾಣಿಕರು ಮತ್ತು ಸಂಪಿಗೆ ರಸ್ತೆ-ನಾಗಸಂದ್ರ ಮಾರ್ಗದಲ್ಲಿ 45 ಸಾವಿರ ಪ್ರಮಾಣಿಕರು ದಿನನಿತ್ಯ ಪ್ರಯಾಣಿಸುತ್ತಿದ್ದಾರೆ.[ಮೆಟ್ರೋ ನಿಲ್ದಾಣದಲ್ಲಿ ಪಾರ್ಕಿಂಗ್ ಶುಲ್ಕ ಕಟ್ಟಬೇಕು]

ನಮ್ಮ ಮೆಟ್ರೋ ವೆಬ್‌ ಸೈಟ್‌ನಲ್ಲಿರುವಂತೆ ಕನಿಷ್ಠ ಪ್ರಯಾಣ ದರ 10 ರೂ., ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮಾರ್ಗದಲ್ಲಿ ಗರಿಷ್ಠ ಪ್ರಯಾಣ ದರ 40 ಮತ್ತು ಸಂಪಿಗೆ ರಸ್ತೆ- ನಾಗಸಂದ್ರ ಮಾರ್ಗದಲ್ಲಿ 32 ರೂ. ಗಳಾಗಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Bangalore Metro Rail Corporation Ltd (BMRCL) is planning to increase fare of Namma metro from November 2016.
Please Wait while comments are loading...