ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಗೆ ಗೂಗಲ್ ನಮನ

By Mahesh
|
Google Oneindia Kannada News

ಬೆಂಗಳೂರು, ಏ.14: ಭಾರತದ ಸಂವಿಧಾನ ಶಿಲ್ಪಿ, ಆರ್ಥಿಕ ತಜ್ಞ, ಕಾನೂನು ಪಂಡಿತ, ಸಮಾಜ ಸುಧಾರಕ, ದೀನ ದಲಿತರ ದನಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 124ನೇ ಜನ್ಮ ದಿನಾಚರಣೆಯನ್ನು ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಕೂಡಾ ವಿಭಿನ್ನವಾಗಿ ಆಚರಿಸುತ್ತಿದೆ. ಗೂಗಲ್ ಡೂಡ್ಲ್ ಮೂಲಕ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಲಾಗುತ್ತಿದೆ.

ಡಾ. ಬಿ.ಆರ್ ಅಂಬೇಡ್ಕರ್‌ ಅವರ 124ನೇ ಜನ್ಮದಿನಾಚರಣೆಯ ಅಂಗವಾಗಿ ಮಂಗಳವಾರ(ಏ.14) ದೇಶದೆಲ್ಲೆಡೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ 'ಜೈ ಭೀಮ್' ಎಂಬ ಜಯಘೋಷ ಕೇಳಿ ಬರುತ್ತಿದೆ. ಇದೇ ಸಂದರ್ಭದಲ್ಲಿ ಗೂಗಲ್‌ ವಿಶಿಷ್ಟ ರೀತಿಯ ಡೂಡಲ್‌ ರಚಿಸಿ ನಮನ ಸಲ್ಲಿಸುತ್ತಿದೆ. [ಜಾತಿ ಮೀಸಲಾತಿ ನಿಷೇಧ ಅಸಾಧ್ಯ, ಏಕೆಂದರೆ?]

Google Doodle celebrates birthday of Indian economist and social reformer BR Ambedkar

ಗೂಗಲ್ ಇಂಗ್ಲೀಷ್ ಅಕ್ಷರಗಳ ನಡುವೆ ಅಂಬೇಡ್ಕರ್ ಅವರ ಭಾವಚಿತ್ರ ಕಾಣಿಸಿಕೊಂಡಿದೆ. ಈ ಚಿತ್ರವನ್ನು ಕ್ಲಿಕ್ ಮಾಡಿದರೆ ಗೂಗಲ್ ಸರ್ಚ್ ಇಂಜಿನ್ B.R Ambedkar ಸರ್ಚ್ ಪುಟಕ್ಕೆ ನಿಮ್ಮನ್ನು ಕರೆದೊಯ್ಯುತ್ತದೆ. ಭಾರತ ರತ್ನ ಅಂಬೇಡ್ಕರ್ ಅವರ ಹೆಸರಿನಲ್ಲಿ ಡೂಡ್ಲ್ ರಚಿಸುವ ಮೂಲಕ ದೇಶದೆಲ್ಲೆಡೆ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಸಂಭ್ರಮಕ್ಕೆ ಇನ್ನಷ್ಟು ಮೆರಗು ತರಲಾಗಿದೆ. [ಜಾತಿ ಗಣತಿ: ಯಾವ ಜಾತಿಗೆ ಯಾವ ಕಾಲಂ]

ಖ್ಯಾತ ನಾಮರ ಹುಟ್ಟುಹಬ್ಬ, ಹಬ್ಬ ಹರಿದಿನ, ವಾರ್ಷಿಕೋತ್ಸವ ದಿನಗಳಲ್ಲಿ ಗೂಗಲ್ ಲೋಗೋವನ್ನು ಅಲಂಕರಿಸಿ ಪ್ರದರ್ಶಿಸಲಾಗುತ್ತದೆ. ಗೂಗಲ್ ಲೋಗೋವನ್ನು ಕಲಾತ್ಮಕವಾಗಿ ರೂಪಿಸುವುದಕ್ಕೆ ಡೂಡಲ್ಸ್ ಎನ್ನಲಾಗುತ್ತದೆ. ಪ್ರತಿ ವರ್ಷ ಆಯ್ದ ವಿಶೇಷ ಸಂದರ್ಭಕ್ಕಾಗಿ ಡೂಡ್ಲ್ ರಚಿಸಲು ಶಾಲಾ ಮಕ್ಕಳಿಗೆ ವಿವಿಧ ಹಂತದ ಸ್ಪರ್ಧೆ ಏರ್ಪಡಿಸಲಾಗುತ್ತದೆ.ವಿಜೇತ ಡೂಡ್ಲ್ ಗೂಗಲ್ ಇಂಡಿಯಾ ಪೇಜ್ ನಲ್ಲಿ ಕಾಣಿಸಿಕೊಳ್ಳಲಿದೆ.

English summary
Google doodle celebrates birthday of Indian economist, politician and social reformer.B.R Ambedkar is known as father of constitution of India. He campaigned against social discrimination in the society.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X