ಪರಿಶಿಷ್ಟ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ

Posted By: Ananthanag
Subscribe to Oneindia Kannada

ಬೆಂಗಳೂರು, ನವೆಂಬರ್ 02: ಸರ್ಕಾರವು ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ನೀಡಲು ನಿರ್ಧರಿಸಿದ್ದು, ಈ ಸಂಬಂಧ ಟೆಂಡರ್ ಕರೆಯಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌. ಆಂಜನೇಯ ತಿಳಿಸಿದ್ದಾರೆ.

ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ಪದವಿ, ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಓದುತ್ತಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುವುದು ಎಂದ ಅವರು. ಪರಿಶಿಷ್ಟ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿ ವಿಶೇಷ ಘಟಕ ಯೋಜನೆಯಡಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುವುದು. ಸಿಇಟಿ ಮೂಲಕ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ಪೂರ್ಣಪ್ರಮಾಣದಲ್ಲಿರುತ್ತದೆ ಎಂದರು.[ಅಕ್ಕ ಸಮ್ಮೇಳನ, ದಲಿತ ಕಲಾವಿದರ ಬಗ್ಗೆ ಸಚಿವ ಆಂಜನೇಯ]

Government decide to provide the laptop to sc/st higher studying students

ಪರಿಶಿಷ್ಟ ಸಮುದಾಯಗಳಿಗೆ ವಿಶೇಷ ಘಟಕ ಯೋಜನೆಯಡಿಯಲ್ಲಿ ಮೀಸಲಿರಿಸಿರುವ 19 ಸಾವಿರ ಕೋಟಿ ಹಣ ಸಂಪೂರ್ಣವಾಗಿ ಮಾರ್ಚ್‌ ವೇಳೆಗೆ ಖರ್ಚು ಮಾಡಲು ನಿರ್ಧರಿಸಲಾಗಿದೆ. ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಹಣವನ್ನು ಫಲಾನುಭವಿಗಳಿಗೆ ತಲುಪಿಸುವಂತೆ ಅಭಿವೃದ್ಧಿ ಕ್ರಿಯಾಯೋಜನೆ ರೂಪಿಸಲಾಗುವುದು ಎಂದರು.

ಶಿಕ್ಷಣ, ನಗರಾಭಿವೃದ್ಧಿ, ನೀರಾವರಿ, ಲೋಕೋಪಯೋಗಿ ಇಲಾಖೆ ಮುಂತಾದ ಇಲಾಖೆಗಳಿಗೆ ಕ್ರಿಯಾ ಯೋಜನೆ ರೂಪಿಸಿದ್ದು, ಅಂತೆಯೇ ಹಣ ಖರ್ಚು ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.[ಹಿಂದುಳಿದವರೆಗೆ ಆಂಜನೇಯ ಏನ್ ಮಾಡಿದಾರೆ? ಓದಿ]

Government decide to provide the laptop to sc/st higher studying students

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಚಿಂತಿಸಿದ್ದು. ಯಾವ್ಯಾವ ಇಲಾಖೆಯಲ್ಲಿ ಭರ್ತಿಯಾಗಿಲ್ಲ ಎಂಬುದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಹಿಂದುಳಿದ ವರ್ಗಗಳ ಆಯೋಗ ಜಾತಿಗಣತಿ ಕುರಿತು ನಡೆಸಿರುವ ಸಮೀಕ್ಷಾ ವರದಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ತಿಂಗಳ ಕೊನೆಯಲ್ಲಿ ಪುನರ್ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬರುವ ಮಾರ್ಚ್ ವೇಳೆಗೆ ವರದಿಯನ್ನೂ ಪ್ರಕಟಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆಗೆ ಬಗ್ಗೆ ಜನಾರ್ಧನ ಪೂಜಾರಿ ಅವರು ಪದೇ ಪದೇ ಹೇಳುತ್ತಲೇ ಇದ್ದಾರೆ. ಹುದ್ದೆ ಖಾಲಿಯಿಲ್ಲವೆಂದು ನಾವೂ ಹೇಳುತ್ತಲೇ ಇದ್ದೇವೆ ಎಂದು ವ್ಯಂಗ್ಯವಾಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Government excogitation to provide the laptop to sc/st Professional and postgraduate students said Social Welfare Minister H anjaneya.
Please Wait while comments are loading...