ರಾಜ್ಯದ 2,500 ಗ್ರಾಮಪಂಚಾಯ್ತಿಗಳಿಗೆ ವೈಫೈ ಸೌಲಭ್ಯ

Posted By: Nayana
Subscribe to Oneindia Kannada

ಬೆಂಗಳೂರು, ನವೆಂಬರ್ 16 : ಕರ್ನಾಟಕ ರಾಜ್ಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಈ ವರ್ಷ 2,500 ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ(ನ.16) ಹೇಳಿದ್ದಾರೆ.

ಗ್ರಾಮೀಣ ಪ್ರದೇಶಕ್ಕೆ ರಾಜ್ಯ ಸರಕಾರದಿಂದ ಉಚಿತ ವೈ-ಫೈ ಸೇವೆ

ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸುವುದರಿಂದ ಡಿಜಿಟಲ್ ಯೋಜನೆಗೆ ಸಹಾಯವಾಗಲಿದೆ ಹಾಗೂ ಪ್ರತಿನಗರ ಮತ್ತು ಪಟ್ಟಣಗಳಲ್ಲಿರುವ ಉದ್ಯಮಿಗಳನ್ನು ತಲುಪಲು ಸಹಾಯವಾಗಲಿದೆ ಎಂದು ಬೆಂಗಳೂರು ತಂತ್ರಜ್ಞಾನ ಸಮ್ಮೇಳನ- 2017ರಲ್ಲಿ ಹೇಳಿದ್ದಾರೆ.

Government to bring free Wi-Fi in over 2500 Village Panchayats

ರಾಜ್ಯದಲ್ಲಿ ಒಟ್ಟು ನಾಲ್ಕು ಸಾವಿರ ಗ್ರಾಮ ಪಂಚಾಯ್ತಿಗಳಿದ್ದು, ಮುಂದಿನ ದಿನಗಳಲ್ಲಿ ಈ ಎಲ್ಲಾ ಪಂಚಾಯ್ತಿಗಳಿಗೂ ವೈಫೈ ಸೌಲಭ್ಯ ಸಿಗಲಿದೆ.

ರಾಜ್ಯ ಸರ್ಕಾರ ಮತ್ತು ಗ್ರಾಮ ಮಂಚಾಯ್ತಿಗಳೇ ಇದರ ನಿರ್ವಹಣೆಯನ್ನು ನೋಡಿಕೊಳ್ಳಲಿದ್ದು, ಇದಕ್ಕಾಗಿ ಸರ್ಕಾರ ಪ್ರತಿ ತಿಂಗಳು ಎರಡೂವರೆ ಲಕ್ಷ ರೂ. ಖರ್ಚು ಮಾಡಲಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ನವೆಂಬರ್ 16 ರಿಂದ 18 ರವರೆಗೆ ಬೆಂಗಳೂರು ತಂತ್ರಜ್ಞಾನ ಸಮ್ಮೇಳನವನ್ನು ಆಯೋಜಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah inaugurated Bengaluru Tech Summit 2017 on Thursday.He said that Karnataka Governament new pilot project dubbed Digital India plans to Wirelessly connect Wi-Fi over 2500 Village Panchayats.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ