ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಎಂಎಲ್ಸಿ ಸುದರ್ಶನ್ ಮೇಲೆ ಭೂಕಬಳಿಕೆಯ ಚಕ್ರ

By Kiran B Hegde
|
Google Oneindia Kannada News

ಬೆಂಗಳೂರು, ಜ. 8: ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್. ಸುದರ್ಶನ್ ವಿರುದ್ಧ ಬಂದಿರುವ ಭೂ ಕಬಳಿಕೆ ಆರೋಪದ ಕುರಿತು ಮಾಹಿತಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ವಿ.ಆರ್. ಸುದರ್ಶನ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರಾಗಿ ನೇಮಿಸಿದ್ದನ್ನು ಬಿಜೆಪಿ ವಿರೋಧಿಸಿತ್ತು. ಸುದರ್ಶನ್ ಅವರು ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಸರ್ಕಾರಿ ಭೂಮಿ ಕಬಳಿಸಿ ವಾಣಿಜ್ಯ ಮಳಿಗೆ ನಿರ್ಮಿಸಿದ್ದಾರೆ. ಆದ್ದರಿಂದ ಅವರನ್ನು ಕೆಪಿಎಸ್‌ಸಿಗೆ ನೇಮಿಸಬಾರದು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಕುರಿತು ವಿವರ ಕೇಳಿದರೆ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದರು. [ಸುದರ್ಶನ್ ವಿರುದ್ಧ ರಾಜ್ಯಪಾಲರಿಗೆ ದೂರು]

sudarshan

ಬಿಜೆಪಿ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಆರೋಪದ ಕುರಿತು ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಿದ್ದಾರೆ. [ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್. ಸುದರ್ಶನ್]

English summary
Governer Vajubhai Vala asks report from state government with respect to alleged land encroachment done by former Congress MLC V.R. Sudarshan at Vemagal in Kolar. BJP leaders had complained Karnataka Governor regarding land encroachment on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X