ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಸಾವಿರ ಕೋಟಿ ರೂ : ಎಚ್ಡಿಕೆ

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 5: ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ 1 ಸಾವಿರ ಕೋಟಿ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಬುಧವಾರ ಬೆಂಗಳೂರು ಕೇಂದ್ರ ವಿವಿ ಸ್ನಾತಕೋತ್ತರ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಕಾಲೇಜುಗಳಲ್ಲಿ ಕೇವಲ ಕಲಾ ಮತ್ತು ವಾಣೀಜ್ಯ ಕೋರ್ಸ್ ಗಳಿಗೆ ಅನುಮತಿ ಕೊಟ್ಟಿದೆ, ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರ ಒಂದು ಸಾವಿರ ಕೋಟಿ ರೂ. ಮೀಸಲಿಡಲು ತೀರ್ಮಾನಿಸಿದೆ ಎಂದರು.

'ಕಾಲೇಜು ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್‌ ಕಡ್ಡಾಯಕ್ಕೆ ಸರ್ಕಾರ ಚಿಂತನೆ''ಕಾಲೇಜು ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್‌ ಕಡ್ಡಾಯಕ್ಕೆ ಸರ್ಕಾರ ಚಿಂತನೆ'

ಉಪನ್ಯಾಸಕರು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಿದರೆ ಅದನ್ನು ಸ್ವಾಗತಿಸುತ್ತೇವೆ, 47ಎಕರೆ ಜಾಗ, ಹಣಕಾಸಿನ ನೆರವನ್ನು ನೀಡಲು ನಾನು ಸಿದ್ಧ, ಆದರೆ ಇಲ್ಲಿನ ಉಪಕುಲಪತಿ ಸೂಕ್ತವಾಗಿ ಕೆಲಸ ಮಾಡಬೇಕಿದೆ.

Govt colleges will get new facelift wirh Rs1K crores

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ರಾಜ್ಯದ ವಿವಿಗಳನ್ನು ಅಂತಾರಾಷ್ಟ್ರೀಯ ವಿವಿಗಳನ್ನಾಗಿಸಲು ನಾವು ಶ್ರಮಿಸಲು ಸಿದ್ಧರಿದ್ದೇವೆ ಎಲ್ಲಾ ನೆರವನ್ನು ಸರ್ಕಾರದಿಂದ ನೀಡಲಾಗುತ್ತದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.

English summary
Chief minister H.D.Kumaraswamy has promised that the government will be provided Rs.1,000 crores for development of government colleges in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X