ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮರಾಜ್ಯದ ಪರಿಕಲ್ಪನೆ ನೀಡಿದ್ದೇ ವಾಲ್ಮೀಕಿ: ಬಿ.ಎಸ್.ಯಡಿಯೂರಪ್ಪ

|
Google Oneindia Kannada News

"ಭಾರತೀಯ ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿದ ಸಂಸ್ಕೃತದ ಆದಿ ಕವಿ ವಾಲ್ಮೀಕಿಗಳ ಕೊಡುಗೆ ಅನನ್ಯ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಾಲ್ಮೀಕಿ ಜಯಂತಿ: ಟ್ವಿಟ್ಟರ್ ನಲ್ಲಿ ಶುಭಹಾರೈಸಿದ ಗಣ್ಯರುವಾಲ್ಮೀಕಿ ಜಯಂತಿ: ಟ್ವಿಟ್ಟರ್ ನಲ್ಲಿ ಶುಭಹಾರೈಸಿದ ಗಣ್ಯರು

ಇಂದು(ಅ.5) ರಾಜ್ಯದಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಾಲ್ಮೀಕಿ ಜಯಂತಿ ಸಮಾರಂಭವನ್ನು ದೀಪ ಬೆಳಗುವ ಮೂಲಕ ಆಚರಿಸಿದರು.

Great sage Valmiki has given us the concept of Ram rajya: B.S.Yeddyurappa

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಭಾರತೀಯ ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿದ ಸಂಸ್ಕೃತದ ಆದಿ ಕವಿ ವಾಲ್ಮೀಕಿಗಳ ಕೊಡುಗೆ ಅನನ್ಯ. ರಾಮರಾಜ್ಯದ ಪರಿಕಲ್ಪನೆಯನ್ನು ನಮಗೆ ನೀಡಿರುವುದೇ ಮಹರ್ಷಿ ವಾಲ್ಮೀಕಿ ಎಂದು ಬಣ್ಣಿಸಿದರು. ವಾಲ್ಮೀಕಿ ಜನಾಂಗದ ಸಮಗ್ರ ಏಳಿಗೆಗಾಗಿ ಭಾರತೀಯ ಜನತಾ ಪಾರ್ಟಿಯು ಬದ್ಧವಾಗಿದೆ ಎಂದು ಸಹ ಈ ಸಂದರ್ಭದಲ್ಲಿ ಅವರು ಹೇಳಿದರು. ಬಿಜೆಪಿಯ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Great sage Valmiki has given us the concept of Ram rajya, BJP state president B S Yeddyurappa told to media. He was inuagurating Valmiki Jayanti programme in BJP office in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X