ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಹತ್ಯೆ : ನಕ್ಸಲರ ಈಮೇಲ್ - ಪತ್ರಗಳ ಬೆನ್ನು ಹತ್ತಿದ ಪೊಲೀಸ್

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 07 : ಗೌರಿ ಲಂಕೇಶ್ ಹತ್ಯೆಯ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅವರನ್ನು ವಿರೋಧಿಸುತ್ತಿದ್ದ ನಕ್ಸಲರ ಬಗ್ಗೆಯೂ ಮಾಹಿತಿ ಸಂಗ್ರಹಣೆ ಮಾಡಲಿದೆ. ಗೌರಿ ಲಂಕೇಶ್ ಅವರನ್ನು ವಿರೋಧಿಸಿ ಪತ್ರ, ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗೌರಿ ಲಂಕೇಶ್ ಹತ್ಯೆಯ ಕಡೆಯ ಕ್ಷಣಗಳು ಹೇಗಿದ್ದವು?ಗೌರಿ ಲಂಕೇಶ್ ಹತ್ಯೆಯ ಕಡೆಯ ಕ್ಷಣಗಳು ಹೇಗಿದ್ದವು?

ಮಲೆನಾಡಿನ ನಕ್ಸಲ್ ಚಳವಳಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಮುಖ್ಯವಾಹಿನಿಗೆ ಕರೆ ತರಲು ಗೌರಿ ಲಂಕೇಶ್ ಪ್ರಯತ್ನಿಸುತ್ತಿದ್ದರು. ನಾಲ್ವರನ್ನು ಮುಖ್ಯವಾಹಿನಿಗೆ ಕರೆದುಕೊಂಡು ಬಂದಿದ್ದರು. ಇದರಿಂದ ಕೆಲವು ನಕ್ಸಲರು ಅವರ ಮೇಲೆ ಅಸಮಾಧಾನಗೊಂಡಿದ್ದರು.

Hate letters to Gauri Lankesh from naxals under probe

ಕೆಲವು ನಕ್ಸಲರಿಂದ ಗೌರಿ ಲಂಕೇಶ್ ಅವರಿಗೆ ಬೆದರಿಕೆ ಪತ್ರ, ಇ ಮೇಲ್ ಬಂದಿದೆ ಎಂದು ಕುಟುಂಬದವರು ಹೇಳುತ್ತಿದ್ದಾರೆ. ಆದ್ದರಿಂದ, ಆ ಆಯಾಮದಲ್ಲಿಯೂ ಪೊಲೀಸರು ತನಿಖೆ ನಡೆಸಲಿದ್ದಾರೆ.

ಎಸ್‌ಐಟಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ. ಹತ್ಯೆ ಬಗ್ಗೆ ಯಾವುದೇ ನಿರ್ಧಾರಕ್ಕೆ ಇನ್ನೂ ತನಿಖಾ ತಂಡ ಬಂದಿಲ್ಲ. ಗುಂಡು ಹಾರಿಸಿ ಹತ್ಯೆ ಮಾಡಿದ ವ್ಯಕ್ತಿಗಳ ಗುರುತು ಪತ್ತೆ ಹಚ್ಚಲು ಪೊಲೀಸರು ಆದ್ಯತೆ ನೀಡಿದ್ದಾರೆ.

ಕಿಲ್ಲರ್ ಕರ್ನಾಟಕ: ಸಿದ್ದು ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಮರೀಚಿಕೆಯೇ?ಕಿಲ್ಲರ್ ಕರ್ನಾಟಕ: ಸಿದ್ದು ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಮರೀಚಿಕೆಯೇ?

ಗೌರಿ ಲಂಕೇಶ್ ನಿವಾಸದಲ್ಲಿನ ಸಿಸಿಟಿವಿ ದೃಶ್ಯಾವಳಿ, ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ, ಅಟಾಪ್ಸಿ ವರದಿಯನ್ನು ತನಿಖಾ ತಂಡ ಪರಿಶೀಲನೆ ನಡೆಸುತ್ತಿದೆ. ಮೊಬೈಲ್ ಕರೆಗಳ ಮಾಹಿತಿಯನ್ನು ಸಂಗ್ರಹಣೆ ಮಾಡಲಾಗುತ್ತಿದ

ಸೆ.5ರ ಮಂಗಳವಾರ ರಾತ್ರಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹತ್ಯೆಯ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಿದೆ.

English summary
The probe into the Gauri Lankesh murder case will also focus on the hate letters she received from some naxalites. It was claimed that she had received some hate letters from naxals who were unhappy with her. Family members have said that she was getting hate mails and hate letters
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X