ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಜೂ. 11ಕ್ಕೆ ಮುಂದೂಡಿದ ಹೈಕೋರ್ಟ್

By Nayana
|
Google Oneindia Kannada News

ಬೆಂಗಳೂರು, ಜೂನ್ 6: ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಜೂನ್ 11ಕ್ಕೆ ಹೈಕೋರ್ಟ್ ಮುಂದೂಡಿದೆ.

ವಿದ್ವತ್ ಮೇಲೆ ಶಾಸಕ ಎನ್‌ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕ ಸದಸ್ಯ ಪೀಠ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ಜಾರಿ ಮಾಡಿದೆ.

ವಿದ್ವತ್ ಮೇಲೆ ಹಲ್ಲೆ : ಮೊಹಮ್ಮದ್ ನಲಪಾಡ್ ಹೇಳಿದ ಘಟನೆಯ ವಿವರ ವಿದ್ವತ್ ಮೇಲೆ ಹಲ್ಲೆ : ಮೊಹಮ್ಮದ್ ನಲಪಾಡ್ ಹೇಳಿದ ಘಟನೆಯ ವಿವರ

ವಿದ್ವತ್ ಮೇಲೆ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ನಲಪಾಡ್ ಪರ ವಕೀಲ ಬಿ.ವಿ. ಆಚಾರ್ಯ ವಾದ ಮಂಡಿಸಿದರು. ವಿಚಾರಣೆಯನ್ನು ನ್ಯಾಯಾಲಯ ಜೂನ್ 11ಕ್ಕೆ ಮುಂದೂಡಿದ್ದು, ಆ ದಿನ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.

HC adjourns Nalapad bail plea on June 11

ಮೊಹಮ್ಮದ್ ನಲಪಾಡ್ ಅರ್ಜಿ ವಿಚಾರಣೆ ಮೂರನೇ ಬಾರಿಯೂ ವಜಾವಾಗಿದೆ. ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ 2 ನೇ ಬಾರಿಯೂ ವಜಾ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ 2 ನೇ ಬಾರಿಯೂ ವಜಾ

ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದಾರೆ. 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.

ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಇತರ 6 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

English summary
High court has issued notice to special public prosecutor following MLA N.A.Haris son Nalapad bail application plea and adjourned the case to June 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X