ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್‌.ಅಶೋಕ್‌ಗೆ ಭೂ ಕಂಟಕ: ತನಿಖೆಗೆ ಹೈಕೋರ್ಟ್ ಅಸ್ತು

|
Google Oneindia Kannada News

Recommended Video

ಆರ್‌.ಅಶೋಕ್‌ಗೆ ಭೂ ಕಂಟಕ: ತನಿಖೆಗೆ ಹೈಕೋರ್ಟ್ ಅಸ್ತು | Oneindia Kannada

ಬೆಂಗಳೂರು, ಸೆ.25: ಬೆಂಗಳೂರಿನ ಸೋಮನಹಳ್ಳಿಯಲ್ಲಿ 8 ಎಕರೆ ಬಗರ್ ಹುಕುಂ ಭೂಮಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ. ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ.

ಎಸಿಬಿ ಎಫ್ಐಆರ್ ರದ್ದು ಮಾಡಲು ಮಂಗಳವಾರ ಹೈಕೋರ್ಟ್ ಪೀಠ ನಿರಾಕರಿಸಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸಬಹುದು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಬಗರ್ ಹುಕುಂ ಭೂ ಹಗರಣ: ಆರ್.ಅಶೋಕ್ ವಿರುದ್ಧ ಎಫ್‌ಐಆರ್ ಬಗರ್ ಹುಕುಂ ಭೂ ಹಗರಣ: ಆರ್.ಅಶೋಕ್ ವಿರುದ್ಧ ಎಫ್‌ಐಆರ್

ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಆರ್ ಅಶೋಕ್ ಸೋಮನಹಳ್ಳಿಯ ಬಗರ್ ಹುಕುಂ ಭೂಪ್ರದೇಶದಲ್ಲಿ 8 ಎಕರೆ ಜಾಗವನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದಾಗಿ ಆರೋಪಿಸಲಾಗಿತ್ತು.

HC nod enquiry against former DCM R.Ashok

2004ರಲ್ಲಿ ಆರ್ ಅಶೋಕ್ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಹಾಲಿ ಮೇಯರ್ ಆಗಿರುವ ವೆಂಕಟೇಶ್ ಮೂರ್ತಿ ಹಾಗೂ ಅವರ ಪತ್ನಿಗೆ ಉತ್ತರ ಹಳ್ಳಿ ಸಮೀಪದ ಸುಮನಹಳ್ಳಿಯಲ್ಲಿ 8 ಎಕರೆ ಜಮೀನನ್ನು ಅಶೋಕ್ ಮಂಜೂರು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶೋಕ್ ವಿರುದ್ಧ ಸೆಕ್ಷನ್ 13(1)(c), 13(1)(d), 13(2) ಐಪಿಸಿ 420 & 120(b) ಅಡಿಯಲ್ಲಿ ದೂರು ದಾಖಲಾಗಿತ್ತು.

ರಾಜಕೀಯ ದುರುದ್ದೇಶದಿಂದ ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಆರ್.ಅಶೋಕ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣದಲ್ಲಿ ಎಸಿಬಿ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಜೆಪಿ ಮಾಜಿ ಸಚಿವ, ಶಾಸಕ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ಎಸಿಬಿ ತನಿಖೆ ನಡೆಸಲು ಹಸಿರು ನಿಶಾನೆ ತೋರಿಸಿದೆ.

English summary
In an embarrassing for state Bjp, Karnataka high court has given green signal to Anti Corruption Bureau against former deputy chief minister R.Ashok in land grabbing case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X